ಸ್ವಚ್ಛತೆಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಚನ್ನಮ್ಮ ಸರ್ಕಲ್‌ನಿಂದ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದವರೆಗೂ ಸ್ವಚ್ಛತಾ ಹೀ ಸೇವಾ’ ಅಭಿಯಾನದಡಿ ಸಾಮೂಹಿಕ ಸ್ವಚ್ಛತಾ ಶ್ರಮದಾನಕ್ಕೆ ಗುರುವಾರ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಚಾಲನೆ ನೀಡಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಸ್ವಚ್ಛೋತ್ಸವ ಎಂಬ ಶೀರ್ಷಿಕೆಯಡಿ ನಗರದಲ್ಲಿ ಚನ್ನಮ್ಮ ಸರ್ಕಲ್‌ನಿಂದ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದವರೆಗಷ್ಟೇ ಸಿಮಿತವಾಗದೆ ನಗರದಲ್ಲಿ ಪ್ರತಿಯೊಂದು ವಾರ್ಡ್ಗಳಿಗೂ ಸ್ವಚ್ಛತಾ ಹೀ ಸೇವಾ’ ಅಭಿಯಾನ ಹರಡಲಿ. ಗದಗದಲ್ಲಿ ಮಾದರಿಯಾಗುವಂತೆ ಪೌರಕಾರ್ಮಿಕರು ಮತ್ತು ಸ್ಥಳೀಯರು ಸಹಕರಿಸಿ ಸ್ವಚ್ಛವಾಗಿರಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸ್ವಚ್ಛಮೇವ ಜಯತೇ ಎನ್ನುವ ಉಕ್ತಿಯಂತೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೂಂಡರೆ ಪ್ರತಿಯೊಬ್ಬರೂ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ್ರ ಕೋಟೂರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ್ ಎನ್.ಪವಾರ, ನಗರಸಭೆ ಪರಿಸರ ಅಭಿಯಂತರ ಆನಂದ್ ಬದಿ, ನಗರಸಭೆ ಸಾಹಾಯಕ ಕಾರ್ಯಪಾಲಕ ಅಭಿಯಂತರ ಎಚ್.ಎ. ಬಂಡಿವಡ್ಡರ, ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಪೌರ ಕಾರ್ಮಿಕರು, ಎನ್.ಎಸ್.ಎಸ್ ಎನ್‌.ಸಿ.ಸಿ. ವಿದ್ಯಾರ್ಥಿಗಳು, ಸಂಘ-ಸಂಸ್ಥೆಯವರು, ವಿದ್ಯಾರ್ಥಿಗಳು ಹಾಜರಿದ್ದರು.

 


Spread the love

LEAVE A REPLY

Please enter your comment!
Please enter your name here