ಪಂಚಭೂತಗಳಲ್ಲಿ ಲೀನರಾದ ಎಸ್‌.ಎಲ್‌ ಭೈರಪ್ಪ: ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

0
Spread the love

ಮೈಸೂರು: ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಇಂದು ಪಂಚಭೂತಗಳಲ್ಲಿ ಲೀನವಾದರು. ಮೈಸೂರು ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು.  ಎಸ್.ಎಲ್ ಭೈರಪ್ಪ ಅವರಿಗೆ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು.

Advertisement

ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜ ಹೊದಿಸಿ ಗೌರವ ಸಲ್ಲಿಕೆ ಮಾಡಿದರು. ಹಲವು ಗಣ್ಯರಿಂದ ಗೌರವ ಸಮರ್ಪಣೆ ಮಾಡಿದ್ದು, ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ಪೊಲೀಸರಿಂದ ಗೌರವ ಸಲ್ಲಿಕೆ ಮಾಡಲಾಯಿತು.ಚಂದ್ರಶೇಖರ ಶಾಸ್ತ್ರೀ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಿವೆ. ಭೈರಪ್ಪ ಅವರ ಪಾರ್ಥಿವ ಶರೀರಕ್ಕೆ ಪುತ್ರರಾದ ರವಿಶಂಕರ್, ಉದಯ್ ಶಂಕರ್ ಮತ್ತು ವಿಲ್ ನಲ್ಲಿ ನಮೂದಿಸಿದ್ದ ಸಹನಾ ವಿಜಯ್ ಕುಮಾರ್ ರಿಂದ ಅಗ್ನಿಸ್ಪರ್ಶ ಮಾಡಲಾಗಿದೆ.

ಭೈರಪ್ಪ ಅವರ ಅಂತ್ಯ ಸಂಸ್ಕಾರಕ್ಕೂ ಮುನ್ನ ಬಂದೂಕು ಪಡೆಯಿಂದ ಗೌರವ ವಂದನೆ ಸಲ್ಲಿಸಲಾಯ್ತು. ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ ಬಳಿಕ ಗೌರವ ವಂದನೆ ನಡೆಯಿತು. ಸರ್ಕಾರಿ ಗೌರವದ ಬಳಿಕ ತ್ರಿವರ್ಣ ಧ್ವಜ ಹಸ್ತಾಂತರ ಮಾಡಲಾಯಿತು. ಭೈರಪ್ಪ ಮಕ್ಕಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌ಸಿ ಮಹದೇವಪ್ಪ ತ್ರಿವರ್ಣ ಧ್ವಜ ಹಸ್ತಾಂತರ ಮಾಡಿದರು.


Spread the love

LEAVE A REPLY

Please enter your comment!
Please enter your name here