`ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆ ಪ್ರಕರಣ: 8 ಮಂದಿ ಅರೆಸ್ಟ್

0
Spread the love

ದಾವಣಗೆರೆ:- `ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕಾರ್ಲ್ ಮಾರ್ಕ್ಸ್‌ ನಗರದಲ್ಲಿ ಜರುಗಿದೆ.

Advertisement

ನಗರದಲ್ಲಿ ಬ್ಯಾನರ್ ವಿಚಾರಕ್ಕೆ ಸೆ.24 ರಂದು ಎರಡು ಕೋಮಿನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ನಡೆದಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ನೂರು ಮಂದಿಯ ವಿರುದ್ಧ 3 ಎಫ್‍ಐಆರ್ ದಾಖಲಾಗಿತ್ತು. ಎರಡೂ ಕಡೆಯವರಿಂದ 8 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ತಂಡಗಳನ್ನು ರಚನೆ ಮಾಡಿದ್ದು, ಇನ್ನೂಳಿದವರ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಪೊಲೀಸರು ಸಾಮಾಜಿಕ ಜಾಲತಾಣದ ಬಗ್ಗೆ ನಿಗಾ ಇಟ್ಟಿದ್ದು, ಸಮಾಜದಲ್ಲಿ ಅಶಾಂತಿ ಮೂಡಿಸಲು ಸುಳ್ಳು ಸುದ್ದಿ ಹರಡಿಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಕಾರ್ಲ್ ಮಾರ್ಕ್ಸ್‌ ನಗರದಲ್ಲಿ ನಡೆದ ಘಟನೆ ಬಗ್ಗೆ ವದಂತಿಗಳನ್ನು ಹರಡಿದರೆ ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here