ನೌಕರರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ: ಸುರೇಶ ಹಳ್ಯಾಳ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸರಕಾರಿ ಅಧಿಕಾರಿ, ಸಿಬ್ಬಂದಿಗಳು ತಮ್ಮ ಸೇವಾ ಅವಧಿಯಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಕಾರ್ಯನಿರ್ವಹಿಸುವಂತೆ ನಿವೃತ್ತ ಖಜಾನೆ ಅಪರ ನಿರ್ದೇಶಕ ಸುರೇಶ ಹಳ್ಯಾಳ ತಿಳಿಸಿದರು.

Advertisement

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗದಗ ಜಿಲ್ಲಾ ಖಜಾನೆ ನೌಕರರ ಘಟಕದ ವತಿಯಿಂದ ಜರುಗಿದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸರಕಾರಿ ಸೇವೆ ದೇವರ ಸೇವೆ ಎಂಬಂತೆ ಪ್ರತಿಯೊಬ್ಬ ಸರಕಾರಿ ಅಧಿಕಾರಿ, ಸಿಬ್ಬಂದಿಗಳು ನಿಸ್ವಾರ್ಥ ಸೇವಾ ಮನೋಭಾವನೆಯೊಂದಿಗೆ ಸರಕಾರದ ಯೋಜನೆಗಳನ್ನು ತಲುಪಿಸಲು ಮುಂದಾಗಬೇಕು. ಖಜಾನೆ ಇಲಾಖೆ ಒಂದು ಪ್ರಮುಖ ಇಲಾಖೆಯಾಗಿದ್ದು, ಇಲ್ಲಿ ಕಾರ್ಯದ ಒತ್ತಡ ಸಹಜ. ಎಂತಹ ಒತ್ತಡದ ಪರಿಸ್ಥಿತಿಯಲ್ಲಿಯೂ ಸಹ ಕಚೇರಿಗೆ ಆಗಮಿಸುವ ಪ್ರತಿಯೊಬ್ಬರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ ಅವರ ಕೆಲಸ-ಕಾರ್ಯಗಳನ್ನು ಮಾಡಿಕೊಟ್ಟಲ್ಲಿ ಸರಕಾರಿ ಕೆಲಸ ದೇವರ ಕೆಲಸ ಎಂಬ ನಾಣ್ಣುಡಿಗೆ ಅರ್ಥ ಬಂದತಾಗುತ್ತದೆ ಎಂದರು.

ಜಿಲ್ಲಾ ಪಂಚಾಯಿತಿ ಲೆಕ್ಕಾಧಿಕಾರಿ ಪ್ರಶಾಂತ ಜೆ.ಸಿ ಮಾತನಾಡಿ, ಖಜಾನೆ-2 ತಂತ್ರಾಂಶ ಅಭಿವೃದ್ಧಿಪಡಿಸುವಲ್ಲಿ ಸುರೇಶ ಹಳ್ಯಾಳ ಅವರ ಪಾತ್ರ ಮಹತ್ವದ್ದು ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ನಿಕಟಪೂರ್ವ ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಪ್ರೇಮನಾಥ ಗರಗ ಮಾತನಾಡಿ, ನಿವೃತ್ತ ಅಪರ ನಿರ್ದೇಶಕರು ಸೇವೆಯಲ್ಲಿದ್ದಾಗ ಅವರ ದಕ್ಷ ಆಡಳಿತ, ಪ್ರಾಮಾಣಿಕತೆ ಹಾಗೂ ಸಾರ್ವಜನಿಕರೊಂದಿಗಿನ ಅವರ ಆತ್ಮೀಯ ಸಂಬಂಧದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳಾರಿ ಮಾತನಾಡಿ, ನಿವೃತ್ತ ಅಪರ ನಿರ್ದೇಶಕರ ನಿಸ್ವಾರ್ಥ ಸೇವಾ ಮನೋಭಾವನೆ, ಶಿಸ್ತು, ಸಮಯ ಪ್ರಜ್ಞೆ ಹಾಗೂ ಅವರ ಘನ ವ್ಯಕ್ತಿತ್ವಗಳ ಕುರಿತು ಅನಿಸಿಕೆ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಜಿಲ್ಲಾ ಖಜಾನೆ ಸಹಾಯಕ ನಿರ್ದೆಶಕ ಎಸ್.ಎಚ್. ಬಾದನಟ್ಟಿ, ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಸರಸ್ವತಿ ಡಿ. ಕನವಳ್ಳಿ, ಜಿಲ್ಲಾ ಖಜಾನೆ ಹಾಗೂ ಉಪ ಖಜಾನೆಗಳ ಅಧಿಕಾರಿ, ಸಿಬ್ಬಂದಿ, ಖಜಾನೆ ಇಲಾಖೆಯ ನಿವೃತ್ತ ಅಧಿಕಾರಿ-ಸಿಬ್ಬಂದಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಖಜಾನೆ ಉಪ ನಿರ್ದೇಶಕ ವಿ. ಹರಿನಾಥ ಬಾಬು ಮಾತನಾಡಿ, ನಿವೃತ್ತ ಖಜಾನೆ ಅಪರ ನಿರ್ದೆಶಕ ಸುರೇಶ ಹಳ್ಯಾಳ ಅವರು ತಮ್ಮ ವೃತ್ತಿ ಜೀವನದ ಬೆನ್ನೆಲುಬಿನಂತಿದ್ದರು. ಅವರು ತಮ್ಮ ವೃತ್ತಿ ಜೀವನದುದ್ದಕ್ಕೂ ಪ್ರತಿಯೊಬ್ಬರಿಗೂ ಮಾರ್ಗದರ್ಶಕರಾಗಿ, ಸ್ನೇಹಿತರಾಗಿ ಸಹಕರಿಸಿದರು. ಸುರೇಶ ಹಳ್ಯಾಳ ಅವರು ನಡೆದಾಡುವ ಖಜಾನೆಯಂತಿದ್ದರು ಎಂದು ಪ್ರಶಂಸೆ ವ್ಯಕ್ತಪಡಿಸಿದರು.


Spread the love

LEAVE A REPLY

Please enter your comment!
Please enter your name here