ಬೆಂಗಳೂರು:– ಹೃದಯಾಘಾತದಿಂದ ಸಫಾರಿಗೆ ತೆರಳಿದ್ದ ಪ್ರವಾಸಿಗ ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜರುಗಿದೆ.
Advertisement
ನಂಜಪ್ಪ (45) ಮೃತ ವ್ಯಕ್ತಿ. ಇವರು ಬೆಂಗಳೂರಿನ ನಾಗರಬಾವಿಯ ನಿವಾಸಿ ಎನ್ನಲಾಗಿದೆ. ಶನಿವಾರ ಸಫಾರಿಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ಪತ್ನಿ ಇಬ್ಬರು ಮಕ್ಕಳೊಂದಿಗೆ ಸಫಾರಿ ವೀಕ್ಷಣೆ ಬಂದಿದ್ದ ವೇಳೆ ನಂಜಪ್ಪ ಸಫಾರಿ ಬಸ್ಸಿನಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ಝೂ ಅಂಬುಲೆನ್ಸ್ ಮೂಲಕ ನಂಜಪ್ಪರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಂಜಪ್ಪ ಮೃತಪಟ್ಟಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.