ಭಾರತ ಹಾಗೂ ಪಾಕಿಸ್ತಾನ ನಡುವಿನ 2025ರ ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ.
ಏಷ್ಯಾಕಪ್ 2025ರ ಫೈನಲ್ ಪಂದ್ಯದ ಆರಂಭಕ್ಕೆ ಗಂಟೆಗಳು ಮಾತ್ರ ಉಳಿದಿರುವಾಗ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಟೀಮ್ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ ವಿರುದ್ಧ ಐಸಿಸಿಗೆ ದೂರು ಸಲ್ಲಿಸಿದೆ. ಭಾರತ ಮತ್ತು ಪಾಕ್ ಪಂದ್ಯದ ವೇಳೆ ಭಾರತೀಯ ವೇಗಿ ಅಶ್ಲೀಲ ಸನ್ನೆಗಳನ್ನು ಮಾಡಿದ್ದಾರೆ ಎಂದು ಪಿಸಿಬಿ ತನ್ನ ದೂರಿನಲ್ಲಿ ಆರೋಪಿಸಿದೆ.
ಸೆಪ್ಟೆಂಬರ್ 21 ರಂದು ಭಾರತ ಮತ್ತು ಪಾಕಿಸ್ತಾನ್ ನಡುವಣ ಸೂಪರ್-4 ಪಂದ್ಯ ನಡೆದಿತ್ತು. ಈ ಪಂದ್ಯದ ವೇಳೆ ಟೀಮ್ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ ಪ್ರೇಕ್ಷಕರ ಕಡೆಗೆ ಅಶ್ಲೀಲ ಕೈ ಸನ್ನೆಗಳನ್ನು ಮಾಡಿದ್ದಾರೆ ಎಂದು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಇಂತಹ ಅನುಚಿತ ವರ್ತನೆಯೊಂದಿಗೆ ಅರ್ಷ್ದೀಪ್ ಸಿಂಗ್ ಐಸಿಸಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದು, ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪಿಸಿಬಿ ಆಗ್ರಹಿಸಿದೆ.



