ತುಮಕೂರು: ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ!

0
Spread the love

ತುಮಕೂರು: ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿಯಾಗಿರುವ ಘಟನೆ ತುಮಕೂರಿನ ಜಿಲ್ಲೆ ಶಿರಾ ನಗರ ಹೊರವಲಯದ ಸಾಯಿ ಡಾಬ ಬಳಿ ನಡೆದಿದೆ.

Advertisement

ಎಮ್ಮೇರಹಳ್ಳಿ ತಾಂಡದ ವಿಷ್ಣು ಎನ್. ನಾಯ್ಕ್(24), ರಾಮನಗರಜಿಲ್ಲೆಯ ಕೊಳಗೊಂಡನಹಳ್ಳಿ ಗ್ರಾಮದ ಮುತ್ತುರಾಜ್ (36) ಮತ್ತು ವೆಂಕಟಧನಶೆಟ್ಟಿ (64) ಮೃತ ದುರ್ಧೈವಿಗಳಾಗಿದ್ದು, ನಿನ್ನೆ ರಾತ್ರಿ ಸುಮಾರು 10 ಗಂಟೆಗೆ ಶಿರಾ ನಗರದಿಂದ ತಮ್ಮ ಸ್ವಗ್ರಾಮವಾದ ಎಮ್ಮೇರಹಳ್ಳಿ ತಾಂಡಕ್ಕೆ ತೆರಳುತ್ತಿದ್ದ ವೇಳೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ.

ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬ ಸರ್ಕಾರಿ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾನೆ. ಇನ್ನೂ ಈ ಘಟನೆ ಸಂಬಂಧ ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here