ಹಾಸನ:- ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟದಿಂದ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ.
ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಗಾಯಾಳುಗಳು. ಇಬ್ಬರಿಗೂ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ನಿಗೂಢ ಸ್ಪೋಟದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.



