HomeKarnataka NewsKarnataka Weather: ಕರ್ನಾಟಕದ ಹಲವೆಡೆ ಮಳೆ: ಉಳಿದೆಡೆ ಒಣಹವೆ!

Karnataka Weather: ಕರ್ನಾಟಕದ ಹಲವೆಡೆ ಮಳೆ: ಉಳಿದೆಡೆ ಒಣಹವೆ!

For Dai;y Updates Join Our whatsapp Group

Spread the love

ಬೆಂಗಳೂರು:– ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಅಬ್ಬರಿಸಿದ್ದ ಮಳೆರಾಯ ಇದೀಗ ಕೊಂಚ ರಿಲೀಫ್ ಕೊಟ್ಟಿದ್ದಾನೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹೆಚ್ಚಿನ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಒಣಹವೆ ಇರಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿದೆ, ಎಚ್​​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!