ವಿಜಯಸಾಕ್ಷಿ ಸುದ್ದಿ, ಗದಗ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಶ್ರೀ ಕರಿಯಮ್ಮ ದೇವಿ ದೇವಸ್ಥಾನದಲ್ಲಿ ದುರ್ಗಾ ನಮಸ್ಕಾರ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಸನಗೌಡ ಹಿರೇಗೌಡರ ಮಾತನಾಡಿ, ದೈಹಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕೆ ಯೋಗವು ಅತ್ಯಂತ ಲಾಭದಾಯಕವಾಗಿದೆ ಎಂದು ಗುರುತಿಸಲು ಇದನ್ನು ಆಚರಿಸಲಾಗುತ್ತದೆ. ಯೋಗವು ದೇಹವನ್ನು ಬಲಪಡಿಸುತ್ತದೆ, ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ಸ್ವಯಂ-ಅರಿವನ್ನು ಹೆಚ್ಚಿಸುತ್ತದೆ ಎಂದರು.
ಮನುಷ್ಯನಿಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೋ, ಆಂತರಿಕ ಸೌಂದರ್ಯವೂ ಅಷ್ಟೇ ಮುಖ್ಯವಾಗಿರುತ್ತದೆ. ಇವೆರಡನ್ನೂ ಚೆನ್ನಾಗಿ ಇಟ್ಟುಕೊಳ್ಳಲು ಯೋಗವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಜಾತಾ ಬರದೂರ ವಹಿಸಿದ್ದರು. ಮಂಜುನಾಥ ಕೊಪ್ಪಳ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ಮ್ಯಾಗೇರಿ ವಂದಿಸಿದರು. ಜಿಲ್ಲಾ ಸಂಚಾಲಕರ ನೇತೃತ್ವದಲ್ಲಿ ಯೋಗ ಶಿಬಿರಾರ್ಥಿಗಳಿಗೆ ಯೋಗ ತರಬೇತಿ ನೀಡಲಾಯಿತು.



