ಉಡುಪಿ: ವಿಜಯದಶಮಿ ಹಿನ್ನೆಲೆಯಲ್ಲಿ ಉಡುಪಿಯ ಕೊಲ್ಲೂರು ದೇಗುಲಕ್ಕೆ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಭೇಟಿ ನೀಡಿದ್ದಾರೆ. ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Advertisement
ಇದೇ ವೇಳೆ, ದೇವಾಲಯದ ಆಡಳಿತ ಮಂಡಳಿಯಿಂದ ಅಣ್ಣಾಮಲೈ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ. ದೇವಾಲಯಕ್ಕೆ ಬಂದಿದ್ದ ಭಕ್ತರು ಅಣ್ಣಾಮಲೈ ನೋಡಲು ಮುಗಿಬಿದ್ದರು. ಅನೇಕರು ಅಣ್ಣಾಮಲೈ ಜೊತೆ ಸೆಲ್ಫಿ ತೆಗೆಸಿಕೊಂಡರು.