ಹೊಸಕೋಟೆ: ರಸ್ತೆ ಅಪಘಾತದಲ್ಲಿ ಇಬ್ಬರು ಯುವತಿಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ಮತ್ತು ಚಿಂತಾಮಣಿ ಹೆದ್ದಾರಿಯಲ್ಲಿ ನಡೆದಿದೆ.
Advertisement
ಹೊಸಕೋಟೆ ಮೂಲದ ಶೈಲ( 25) ಶ್ವೆತ (22) ಮೃತ ದುರ್ದೈವಿಗಳಾಗಿದ್ದು, ಕ್ಯಾಂಟರ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯತ್ತಿದ್ದ ಕಾರಣ ರಸ್ತೆಯಲ್ಲಿ ಜಲ್ಲಿಕಲ್ಲು ಇದ್ದ ಕಾರಣ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾರೆ.
ಈ ವೇಳೆ ಯುವತಿಯರ ಮೇಲೆ ಕ್ಯಾಂಟರ್ ಚಕ್ರ ಹರಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.