ಚಿತ್ರದುರ್ಗ:– ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ಜರುಗಿದೆ.
ಕಾರು ಪಲ್ಟಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. 26 ವರ್ಷದ ಮಲ್ಲಮ್ಮ, 25 ವರ್ಷದ ಸರೋಜಮ್ಮ, ಮತ್ತು ಪುಟ್ಟ ಮಗು ಮೃತರು ಎಂದು ಗುರುತಿಸಲಾಗಿದೆ.
ಇನ್ನೂ ಘಟನೆ ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್ ಮತ್ತು ಸಿಪಿಐ ಗುಡ್ಡಪ್ಪ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



