HomeGadag Newsಸ್ವಚ್ಛತಾ ಕೆಲಸಗಾರರ ಪಾತ್ರ ಮಹತ್ವದ್ದು: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ 

ಸ್ವಚ್ಛತಾ ಕೆಲಸಗಾರರ ಪಾತ್ರ ಮಹತ್ವದ್ದು: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ 

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿಜಿ ಅವರ ಸಂದೇಶವನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ನಗರದ ಗಾಂಧೀ ಸರ್ಕಲ್ ಹತ್ತಿರ ಗುರುವಾರ ಜಿಲ್ಲಾಡಳಿತ, ಗದಗ-ಬೆಟಗೇರಿ ನಗರಸಭೆ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿಜಿ ಜನ್ಮ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧೀಜಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಇದೇ ಸಂಧರ್ಭದಲ್ಲಿ ಸ್ವಚ್ಛತಾ ಹೀ ಸೇವಾ ಹಾಗೂ ನಮಸ್ತೆ ಅಭಿಯಾನದಡಿಯಲ್ಲಿ ಗುರುತಿಸಲಾದ ಸೆಪ್ಟಿಕ್ ಟ್ಯಾಂಕ್ ಮತ್ತು ಸೀವರ್ ಸ್ವಚ್ಛತಾ ಕೆಲಸಗಾರರಿಗೆ ಸುರಕ್ಷಾ ಕಿಟ್‌ಗಳನ್ನು ಹಾಗೂ ಆಯುಷ್ಮಾನ್ ಭಾರತ್ ಕಾರ್ಡ್‌ಗಳನ್ನು ವಿತರಿಸಿ, ನಗರದ ಸ್ವಚ್ಛತೆ ಕಾಪಾಡುವಲ್ಲಿ ಸ್ವಚ್ಛತಾ ಕೆಲಸಗಾರರ ಪಾತ್ರ ಮಹತ್ವದಾಗಿದ್ದು, ನಗರದ ಎಲ್ಲಾ ಪೌರಕಾರ್ಮಿಕರು ನಗರಸಭೆಯಿಂದ ವಿತರಿಸಲಾಗುವ ಸುರಕ್ಷಾ ಕಿಟ್‌ಗಳನ್ನು ಧರಿಸಿಕೊಂಡು ಕೆಲಸ ಮಾಡವಂತೆ ಅಧಿಕಾರಿಗಳು ಕ್ರಮವಹಿಸಬೇಕೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಉದ್ಯಾನದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವನಗೌಡ ಕೊಟೂರು, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಕಾರ್ಯ ಪಾಲಕ ಅಭಿಯಂತರ ಜಗದೀಶ ಹೊಸಮನಿ, ಅಧಿಕಾರಿಗಳಾದ ಬಸವರಾಜ ಬಳ್ಳಾರಿ, ಆನಂದ ಬದಿ, ಎಚ್.ಎ. ಬಂಡಿವಡ್ಡರ್ ಸೇರಿದಂತೆ ಸಿಬ್ಬಂದಿ ವರ್ಗದವರು, ಎನ್.ಸಿ.ಸಿ ವಿದ್ಯಾರ್ಥಿಗಳು, ನಗರಸಭೆ ಕಮ್ಯೂನಿಟಿ ಮೊಬೈಲೈಜರ್‌ಗಳು ಹಾಜರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img