ವಿಜಯಸಾಕ್ಷಿ ಸುದ್ದಿ, ಗದಗ: ಸರಕಾರವು ಅಲ್ಪಸಂಖ್ಯಾತರ ಸಮುದಾಯದ ಕಲ್ಯಾಣಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಅನುಷ್ಠಾನಗೊಳಿಸುವ ಜಿಲ್ಲಾ ಸಮಿತಿಯ 1ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಯೋಜನೆಯಡಿ ಬರುವ ಒಟ್ಟು 22 ಇಲಾಖೆಗಳ ಪ್ರಗತಿ ಪರಿಶೀಲಿಸಿ, ಅಲ್ಪಸಂಖ್ಯಾತರಿಗಾಗಿ ಮೀಸಲಿಟ್ಟ ಆರ್ಥಿಕ ಹಾಗೂ ಬೌದ್ಧಿಕ ಸೌಲಭ್ಯಗಳನ್ನು ಅರ್ಹರು ಪಡೆಯಲು ಸಹಕರಿಸಬೇಕು ಎಂದರು.
ಅಲ್ಪಸಂಖ್ಯಾತರ ಜಿಲ್ಲಾಧಿಕಾರಿ ಅಮಿತ ಬಿದರಿ ಅನುಷ್ಠಾನಗೊಳಿಸುವ ಜಿಲ್ಲಾ ಸಮಿತಿಯ ಪ್ರಗತಿ ವರದಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾರಂಭಿಸಿ ವಿವಿಧ ಇಲಾಖೆಗಳ ವರದಿಯನ್ನು ಜಿಲ್ಲಾ ಸಮಿತಿಯ ಸದಸ್ಯರಿಗೆ ವಿವರಿಸಿದರು.
ಜಿಲ್ಲಾ ಸಮಿತಿಯ ನಾಮನಿರ್ದೇಶಿತ ಸದಸ್ಯರು ಶಾಲೆಯಲ್ಲಿರುವ ಸಮಸ್ಯೆ, ಮೂಲಭೂತ ಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟದ ಬಗ್ಗೆ ಗಮನಹರಿಸಿ ಸೌಲಭ್ಯಗಳನ್ನು ದೊರಕುವಂತೆ ಮಾಡಬೇಕೆಂದು ವಿನಂತಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ಮಟ್ಟದ ನಾಮನಿರ್ದೇಶಿತ ಸದಸ್ಯರು ಹಾಜರಿದ್ದರು.



