ಉರುಸ್ ಮೆರವಣಿಗೆಯಲ್ಲಿಐ ಲವ್ ಮೊಹಮ್ಮದ್’ ಘೋಷಣೆ: ಕಲ್ಲು ತೂರಾಟ, ಜಟಾಪಟಿ

0
Spread the love

ಬೆಳಗಾವಿ: ಬೆಳಗಾವಿಯ ಖಡಕ್‌ ಗಲ್ಲಿಯಲ್ಲಿ ಉರುಸ್ ಮೆರವಣಿಗೆ ವೇಳೆ ‘ಐ ಲವ್ ಮೊಹಮ್ಮದ್’ ಘೋಷಣೆಯಿಂದ ಕೋಮು ಸಂಘರ್ಷ ಭುಗಿಲೆದ್ದಿದೆ. ಅಕ್ಟೋಬರ್ 4ರಂದು ರಾತ್ರಿ ನಡೆದ ಈ ಘಟನೆಯಲ್ಲಿ ಹಿಂದೂಗಳ ಮನೆಗಳ ಮೇಲೆ ಕಲ್ಲುತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

Advertisement

ಹೌದು ಪ್ರತಿ ವರ್ಷ ಶನಿವಾರ ಕೂಟ, ಜಾಲ್ಗಾರ ಗಲ್ಲಿ ಮಾರ್ಗದ ಮೂಲಕ ದರ್ಗಾಗೆ ಮೆರವಣಿಗೆ ಹೋಗುತ್ತಿತ್ತು. ಈ ವರ್ಷ ಅನುಮತಿ ಇಲ್ಲದೆಯೂ ಸಹ ಖಡಕ್ ಗಲ್ಲಿಗೆ ಮೆರವಣಿಗೆ ಎಂಟ್ರಿಯಾಗಿದೆ ಎನ್ನಲಾಗಿದೆ. ಮೆರವಣಿಗೆ ವೇಳೆ ‘ ಐ ಲವ್ ಮುಹಮ್ಮದ್’ ಎಂಬ ಘೋಷಣೆ ಕೂಗಿದ್ದಲ್ಲದೇ ಯಾವಾಗಲೂ ಬಾರದ ಮೆರವಣಿಗೆ ಈಗ ಯಾಕೆ ಬಂದಿದೆ? ತಮ್ಮ ಏರಿಯಾಗೆ ಬಂದು ಘೋಷಣೆ ಕೂಗಿದ್ದು ಯಾಕೆ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ.

ಈ ವೇಳೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ನಡೆದಿದೆ. ಬಳಿಕ ತಲ್ವಾರ್ ಕೂಡ ಪ್ರದರ್ಶನ ಮಾಡಿ ಗೂಂಡಾವರ್ತನೆ ತೋರಲಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೆರವಣಿಗೆಯನ್ನು ಸ್ಥಳದಿಂದ ಕಳುಹಿಸಿದ್ದಾರೆ. ಏಕಾಏಕಿ ಮೆರವಣಿಗೆ ಬಂದವರು ಮತ್ತು ಕಲ್ಲು ತೂರಿದವರ ವಿರುದ್ಧ ಕ್ರಮಕ್ಕೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಡಿಸಿಪಿ ನಾರಾಯಣ ಭರಮನಿ, ಇಬ್ಬರು ಡಿಸಿಪಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here