ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಕೊತ್ತನೂರು ಬಳಿಯ ಸಮೃದ್ಧಿ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಸುಮಾರು 6 ರಿಂದ 8 ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದ್ದು, ನಿನ್ನೆ ಸಂಜೆ ಕಟ್ಟಡ ಕಾರ್ಮಿಕರ ಕಣ್ಣಿಗೆ ಬಿದ್ದಿದೆ. ದೊಡ್ಡಗುಬ್ಬಿಯ ಶ್ರೀಧರ್ ಎಂಬುವವರಿಗೆ ಸೇರಿದ ಅಪಾರ್ಟ್ಮೆಂಟ್ ಆಗಿದ್ದು,
ಅಪಾರ್ಟ್ಮೆಂಟ್ ನ ನಾಲ್ಕನೇ ಮಹಡಿಯಲ್ಲಿ ಪತ್ತೆಯಾಗಿರೋ ಆಸ್ತಿ ಪಂಜರದ ಬಗ್ಗೆ ಸೆಕ್ಯುರಿಟಿ ಗಾರ್ಡ್ ನಿನ್ನೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಸ್ಥಿಪಂಜರ ಎಫ್ ಎಸ್ ಎಲ್ ಗೆ ರವಾನೆ ಮಾಡಲಾಗಿದೆ,
ಮೇಲ್ನೋಟಕ್ಕೆ ಸುಮಾರು 35 ರಿಂದ 40 ವರ್ಷದ ಗಂಡಸಿನ ಮೃತದೇಹ ಅನ್ನೋದು ಗೊತ್ತಾಗಿದೆ. ಪ್ಯಾಂಟ್ ಹಾಗೂ ಶರ್ಟ್ ಧರಿಸಿ ಮಲಗಿದ್ದ ಸ್ಟಿಯಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ.