ಹಾಸನ:- ಹೊಳೆನರಸೀಪುರದ ವಡ್ಡರಹಳ್ಳಿ ಗ್ರಾಮದಲ್ಲಿ ಜಾತಿಗಣತಿಗೆ ತೆರಳುವಾಗ ನಾಯಿಗೆ ಶಿಕ್ಷಕಿಯ ಸ್ಕೂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ.
Advertisement
ಗಾಯಗೊಂಡವರನ್ನು ವಡ್ಡರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ರಾಧಾ ಎನ್ನಲಾಗಿದೆ. ಬೆಳಗ್ಗೆ 10 ಗಂಟೆ ಸಮಯದಲ್ಲಿ ಅವರು ಸಮೀಕ್ಷೆಗೆ ತೆರಳುತ್ತಿದ್ದರು. ಈ ವೇಳೆ ಅವರ ಸ್ಕೂಟರ್‍ಗೆ ನಾಯಿ ಅಡ್ಡ ಬಂದಿದ್ದು, ಡಿಕ್ಕಿಯಾಗಿ ಬಿದ್ದಿದ್ದಾರೆ. ರಸ್ತೆಗೆ ಬಿದ್ದಿದ್ದರಿಂದ ಅವರಿಗೆ ಗಂಭಿರ ಗಾಯಗಳಾಗಿವೆ.
ಸ್ಥಳದಲ್ಲೇ ಪ್ರಜ್ಞೆ ತಪ್ಪಿದ್ದ ಶಿಕ್ಷಕಿಗೆ ಸ್ಥಳೀಯರು ಉಪಚಾರ ಮಾಡಿದ್ದಾರೆ. ಬಳಿಕ ಅವರನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.