ತ್ರಿಶೂರ್:- ಬಾಡಿಗೆ ಮನೆಯೊಂದರಲ್ಲಿ ವ್ಯಕ್ತಿಯ ಶವ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ತ್ರಿಶೂರ್ನಲ್ಲಿ ಜರುಗಿದೆ.
ಮೃತ ವ್ಯಕ್ತಿಯ ಗುರುತು ಅಧಿಕೃತವಾಗಿ ಇನ್ನೂ ಪತ್ತೆಯಾಗಿಲ್ಲ. ಆ ಕೋಣೆಯಲ್ಲಿ ಸನ್ನಿ ಎಂಬ ವ್ಯಕ್ತಿ ವಾಸವಿದ್ದ ಎನ್ನುವ ಕುರಿತು ಮಾಹಿತಿ ಲಭ್ಯವಾಗಿದೆ. ಆದರೆ ಶವ ಆತನದ್ದೇ ಎಂಬುದಕ್ಕೆ ಯಾವುದೇ ಸಾಕ್ಷ್ಯವಿಲ್ಲ ಎನ್ನಲಾಗಿದೆ.
ಸನ್ನಿ ಅಪರಾಧ ಹಿನ್ನೆಲೆಯುಳ್ಳವನಾಗಿದ್ದು, ಈ ಹಿಂದೆ ಕೊಲೆ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕೊಠಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಕಟ್ಟಡದ ನಿವಾಸಿಗಳು ಕುನ್ನಂಕುಲಂ ಪೊಲೀಸರಿಗೆ ಮಾಹಿತಿ ನೀಡಿದರು. ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು.
ದೇಹ ಆಗಲೇ ಭಾಗಶಃ ಸುಟ್ಟಿತ್ತು. ಇದು ಮೇಲ್ನೋಟಕ್ಕೆ ಕೊಲೆ ಪ್ರಕರಣದಂತೆಯೇ ಕಾಣುತ್ತಿದೆ, ಆದರೆ ತನಿಖೆ ಮತ್ತು ಮರಣೋತ್ತರ ಪರೀಕ್ಷೆಯ ನಂತರವೇ ಸತ್ಯ ತಿಳಿಯಲಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.