• About
  • Advertise
  • Privacy & Policy
  • Contact
Saturday, November 14, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Vijaya Sakshi News Desk by Vijaya Sakshi News Desk
October 6, 2025
in Karnataka News
2028ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆ ಮುಂದುವರೆಸುತ್ತೇವೆ: ಸಿಎಂ ಸಿದ್ದರಾಮಯ್ಯ
0
SHARES
0
VIEWS
Share on Facebook

ಕೊಪ್ಪಳ: ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ.

ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೊಪ್ಪಳದಲ್ಲಿ ಶೇ.97ರಷ್ಟು ಸಮೀಕ್ಷೆ ಪೂರ್ಣ
ಕೊಪ್ಪಳ ಜಿ್ಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಸಮಾಜದಲ್ಲಿ ಬದಲಾವಣೆಯನ್ನು ವಿರೋಧಿಸುವವರು ಸಮೀಕ್ಷೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದರು. ಕೊಪ್ಪಳದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದಾ, ಕಡಿಮೆ ಅಂತರದಲ್ಲಿ ಸೋತಿದ್ದರೂ, ಕೊಪ್ಪಳದ ಜನ ತನ್ನನ್ನು ಆಶೀರ್ವದಿಸಿದ್ದರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಜನತೆಗೆ ಧನ್ಯವಾದಗಳನ್ನು ತಿಳಿಸಿದರು.

ಬಲ್ಡೋಟಾ ಕಾರ್ಖಾನೆ :
ಬಲ್ಡೋಟಾ ಕಾರ್ಖಾನೆ ಯೋಜನೆ ಕುರಿತಂತೆ ಕೊಪ್ಪಳದಲ್ಲಿ ಹೋರಾಟಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಲ್ಡೋಟಾ ಕಾರ್ಖಾನೆಯ ವಿಚಾರ ನ್ಯಾಯಾಲಯದಲ್ಲಿ ವಿಲೇ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರಿಸರ ಮಾಲಿನ್ಯ ತಡೆಯಲು ಕ್ರಮ
ಎಂಎಸ್ ಪಿ ಎಲ್ ಸೇರಿದಂತೆ ವಿವಿಧ ಕೈಗಾರಿಕೆಗಳಿಂದ ಬರುವ ಧೂಳಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಇದನ್ನು ತಡೆಗಟ್ಟಲು ಸರ್ಕಾರದ ಕ್ರಮ ತೆಗೆದುಕೊಳ್ಳುತ್ತಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕಾರ್ಖಾನೆಗಳಿಂದ ಬರುವ ಧೂಳನ್ನು ಪರೀಕ್ಷೆ ನಡೆಸಿ, ಧೂಳು ಬರದಂತೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

ಕೇಂದ್ರ ಸರ್ಕಾರವೂ ಜಾತಿಗಣತಿ ನಡೆಸಲಿದೆ
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದಾರೆ. ಕೇಂದ್ರ ಸರ್ಕಾರ ನಡೆಸಲಿರುವ ಜಾತಿಗಣತಿಗೂ ವಿರೋಧ ವ್ಯಕ್ತಪಡಿಸುತ್ತಾರೆಯೇ ? ಎಂದು ಪ್ರಶ್ನಿಸಿದರು.

ಲಿಂಗಾಯಿತ ಪ್ರತ್ಯೇಕ ಧರ್ಮ: ಜನರೇ ನಿಲುವೇ ನನ್ನ ನಿಲುವು
ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮ ಎನ್ನುವ ಬಗ್ಗೆ ಮುಖ್ಯಮಂತ್ರಿಗಳ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿ, ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ, ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು ಎಂದರು.

ಗ್ಯಾರಂಟಿಗಳು ಸಮರ್ಪಕವಾಗಿ ತಲುಪುತ್ತಿದೆ
ಗ್ಯಾರಂಟಿಗಳು ಸಮರ್ಪಕವಾಗಿ ಜನರಿಗೆ ತಲುಪುತ್ತಿಲ್ಲ ಎಂಬುದಕ್ಕೆ ಉತ್ತರಿಸಿ, ಗ್ಯಾರಂಟಿಗಳನ್ನು ಸಮರ್ಪಕವಾಗಿ ತಲುಪಿಸಲಾಗುತ್ತಿದೆ ಎಂದರು.

ಕೆಮ್ಮಿನ ಔಷಧಿ-ಎಚ್ಚರಿಕೆ ವಹಿಸುವಂತೆ ಇಲಾಖೆಗೆ ಸೂಚನೆ
ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ರಾಜ್ಯಸರ್ಕಾರದ ಕ್ರಮವೇನು ಎಂಬುದಕ್ಕೆ ಉತ್ತರಿಸಿ, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

Tags: kannadanewsKarnatakapoliticalsiddaramaiahVijayasakshivijayasakshinews
ShareSendShare
Previous Post

ಭೀಕರ ಅಪಘಾತ; ಲಾರಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಪೊಲೀಸ್ ಕಾನ್ಸ್ಟೇಬಲ್!

Next Post

ಜಾತಿಗಣತಿಯಲ್ಲಿ ನಮ್ಮ ಧರ್ಮಕ್ಕೆ ಪ್ರತ್ಯೇಕ ಕಾಲಂ ನೀಡಲು ಒತ್ತಾಯಿಸುತ್ತೇವೆ: ಈಶ್ವರ ಖಂಡ್ರೆ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಮಹದಾಯಿ ವಿವಾದ: ಗೋವಾ ಸಿಎಂ ಹೇಳಿಕೆ ವಿರುದ್ಧ ಸಚಿವ ಈಶ್ವರ್ ಖಂಡ್ರೆ ಆಕ್ರೋಶ

ಜಾತಿಗಣತಿಯಲ್ಲಿ ನಮ್ಮ ಧರ್ಮಕ್ಕೆ ಪ್ರತ್ಯೇಕ ಕಾಲಂ ನೀಡಲು ಒತ್ತಾಯಿಸುತ್ತೇವೆ: ಈಶ್ವರ ಖಂಡ್ರೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಮಧುಮೇಹ ಇದ್ದರೆ ಚರ್ಮದಲ್ಲೂ ಕಾಣಿಸಿಕೊಳ್ಳುತ್ತಾ ತುರಿಕೆ? ನಿರ್ಲಕ್ಷಿಸಿದರೆ ಅಪಾಯ!

ಮಧುಮೇಹ ಇದ್ದರೆ ಚರ್ಮದಲ್ಲೂ ಕಾಣಿಸಿಕೊಳ್ಳುತ್ತಾ ತುರಿಕೆ? ನಿರ್ಲಕ್ಷಿಸಿದರೆ ಅಪಾಯ!

November 14, 2026
ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ವಂಚನೆ, ಬೆಲೆ ಏರಿಕೆಯಿಂದ ಬಡವರ ಬದುಕು ದುಸ್ತರ: ಅನಿಲ ಮೆಣಸಿನಕಾಯಿ

ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ವಂಚನೆ, ಬೆಲೆ ಏರಿಕೆಯಿಂದ ಬಡವರ ಬದುಕು ದುಸ್ತರ: ಅನಿಲ ಮೆಣಸಿನಕಾಯಿ

November 14, 2026
ಕಾಡಾನೆಗಳ ಅಟ್ಟಹಾಸಕ್ಕೆ ಬಡ ಮಹಿಳೆ ಬಲಿ; ಶವ ಮುಂದಿಟ್ಟು ಗ್ರಾಮಸ್ಥರ  ಆಕ್ರೋಶ!

ಕಾಡಾನೆಗಳ ಅಟ್ಟಹಾಸಕ್ಕೆ ಬಡ ಮಹಿಳೆ ಬಲಿ; ಶವ ಮುಂದಿಟ್ಟು ಗ್ರಾಮಸ್ಥರ ಆಕ್ರೋಶ!

November 14, 2026
ಬೆಂಗಳೂರಿಗರೇ ಗಮನಿಸಿ! ನಾಳೆಯಿಂದ ಪಿಂಕ್ ಲೈನ್ ಮೆಟ್ರೋ ಆರಂಭ; ಮೊದಲ ರೈಲು, ಕೊನೆಯ ರೈಲು ಸಮಯ ಇಲ್ಲಿದೆ

ಮೆಟ್ರೋ ಪ್ರಯಾಣಿಕರೇ ಗಮನಿಸಿ; ಯೆಲ್ಲೋ ಲೈನ್‌ನಲ್ಲಿ ಕಾಯುವ ಸಮಯ ಕಡಿಮೆ, 13ನೇ ರೈಲು ಎಂಟ್ರಿ!

November 14, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಮಧುಮೇಹ ಇದ್ದರೆ ಚರ್ಮದಲ್ಲೂ ಕಾಣಿಸಿಕೊಳ್ಳುತ್ತಾ ತುರಿಕೆ? ನಿರ್ಲಕ್ಷಿಸಿದರೆ ಅಪಾಯ!

ಮಧುಮೇಹ ಇದ್ದರೆ ಚರ್ಮದಲ್ಲೂ ಕಾಣಿಸಿಕೊಳ್ಳುತ್ತಾ ತುರಿಕೆ? ನಿರ್ಲಕ್ಷಿಸಿದರೆ ಅಪಾಯ!

November 14, 2026
ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ವಂಚನೆ, ಬೆಲೆ ಏರಿಕೆಯಿಂದ ಬಡವರ ಬದುಕು ದುಸ್ತರ: ಅನಿಲ ಮೆಣಸಿನಕಾಯಿ

ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ವಂಚನೆ, ಬೆಲೆ ಏರಿಕೆಯಿಂದ ಬಡವರ ಬದುಕು ದುಸ್ತರ: ಅನಿಲ ಮೆಣಸಿನಕಾಯಿ

November 14, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper