ಕೋಲಾರ:- ಭೀಕರ ರಸ್ತೆ ಸರಣಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಜರುಗಿದೆ.
Advertisement
ಘಟನೆಯಲ್ಲಿ ಸುಮಾರು 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಬಂಗಾರಪೇಟೆ, ಕೆಜಿಎಫ್ ಹಾಗೂ ಕೋಲಾರ ಆಸ್ಪತ್ರೆಗೆ ರವಾಸಲಾಗಿದೆ. ಬೆಂಗಳೂರು-ಚೆನೈ ಎಕ್ಸ್‌ಪ್ರೆಸ್ ವೇನಲ್ಲಿ ಟೆಂಪೋ ವಾಹನಕ್ಕೆ ಈಚರ್ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಟೆಂಪೋ, ಆ್ಯಂಬುಲೆನ್ಸ್ಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಆ್ಯಂಬುಲೆನ್ಸ್ ಚಾಲಕ ವಿಕ್ರಮ್ ಪಾಲ್ ಮತ್ತು ಟೆಂಪೋ ಚಾಲಕ ಶಿವರಾಜ್ ಮೃತರು.
ಟೆಂಪೋದಲ್ಲಿ ಬೆಂಗಳೂರಿನ ಎಸ್ಕೆಸಿ ಕ್ಯಾಟರಿಂಟ್ನ 15 ಜನ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಸುಮಾರು ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಸದ್ಯ ಸ್ಥಳಕ್ಕೆ ಎಸ್ಪಿ ಶಿವಾಂಶು ರಜಪೂತ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.