ಮಕ್ಕಳಿಗೆ ಸಿರಪ್‌ ಕೊಡುವ ಮುನ್ನ ಹುಷಾರ್..!‌ ರಾಜ್ಯ ಆರೋಗ್ಯ ಇಲಾಖೆಯಿಂದ ಗೈಡ್​ ಲೈನ್ ರಿಲೀಸ್​

0
Spread the love

ಬೆಂಗಳೂರು: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕಿಡ್ನಿ ಸಂಬಂಧಿತ  ತೊಂದರೆಗಳಿಂದಾಗಿ 11 ಮಕ್ಕಳು ಸಾವನ್ನಪ್ಪಿದ್ದರು. ಕೆಮ್ಮಿನ ಸಿರಪ್ ಸೇವಿಸಿದ್ದರಿಂದಲೇ ಅವರು ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ 2 ವರ್ಷದೊಳಗಿನ ಮಕ್ಕಳಿಗೆ ಶೀತ, ಕೆಮ್ಮಿನ ಸಿರಪ್ ನೀಡಬೇಡಿ ಎಂದು ಈಗಾಗಲೇ ಕೇಂದ್ರ ಸರ್ಕಾರ ಸೂಚನೆ ನೀಡಿತ್ತು. ಆ ಬೆನ್ನಲ್ಲೇ ರಾಜ್ಯ ಸರ್ಕಾರವೂ ಗೈಡ್​ಲೈನ್ಸ್​ ಬಿಡುಗಡೆ ಮಾಡಿದೆ.

Advertisement

ಮಾರ್ಗಸೂಚಿಯಲ್ಲಿ ಏನಿದೆ?

  • 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಅಥವಾ ಶೀತದ ಸಿರಪ್​ಗಳನ್ನು ನೀಡಬಾರದು.
  • 2ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ವೈದ್ಯಕೀಯ ಪರೀಕ್ಷೆಯ ನಂತರ ತಜ್ಞ ವೈದ್ಯರ ನಿರ್ದಿಷ್ಟ ಸಲಹೆ ಮೇರೆಗೆ ಮಾತ್ರ ಔಷಧಿಗಳನ್ನು ನೀಡಿ.
  • ಸಾಧ್ಯವಾದಷ್ಟು ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಬಳಸಿ. ಬಹು ಔಷಧಿಗಳ ಸಂಯೋಜನೆ ಇರುವ ಸಿರಪ್​ಗಳ ಬಳಕೆ ಬೇಡ.
  • ಸುರಕ್ಷಿತ  ಮನೆ ಮದ್ದು, ಹೆಚ್ಚು ದ್ರವ ಪದಾರ್ಥಗಳನ್ನ ಮಕ್ಕಳಿಗೆ ನೀಡುವ ಜೊತೆ ವಿಶ್ರಾಂತಿ ಮತ್ತು ನಿದ್ರೆಗೆ ಅವಕಾಶ ಮಾಡಿಕೊಡಿ.
  • ಮಕ್ಕಳಿಗೆ ಸಾಧ್ಯವಾದಷ್ಟು ಪೌಷ್ಟಿಕ ಆಹಾರಗಳನ್ನೇ ನೀಡಿ. ಯಾವುದೇ ಕಾರಣಕ್ಕೂ ಸ್ವಯಂ ಔಷಧೋಪಚಾರ ಮಾಡಬೇಡಿ.
  • ವೈದ್ಯರ prescription ಇಲ್ಲದೆ ಕೆಮ್ಮಿನ ಸಿರಪ್​ಗಳನ್ನು ಎಂದಿಗೂ ಖರೀದಿಸಬೇಡಿ ಅಥವಾ ಬಳಸಬೇಡಿ.
  • ಈ ಹಿಂದೆ ಬಳಸಿ ಉಳಿದ ಔಷಧಗಳನ್ನು ಅಥವಾ ಇತರರು ಶಿಫಾರಸು ಮಾಡಿದ ಔಷಧಗಳನ್ನು ಬಳಸುವುದನ್ನು ನಿಲ್ಲಿಸಿ.
  • ಮಕ್ಕಳಲ್ಲಿ ಯಾವುದೇ ಅಸಹಜ ಪ್ರತಿಕ್ರಿಯೆ, ನಿದ್ರಾವಸ್ಥೆ, ವಾಂತಿ ಅಥವಾ ಉಸಿರಾಟದ ತೊಂದರೆ ಕಂಡುಬಂದಲ್ಲಿ ತಕ್ಷಣ ಹತ್ತಿರದ ತಜ್ಞ ವೈದ್ಯರಿಗೆ ತೋರಿಸಿ.
  • ಔಷಧದ ಅವಧಿ ಮುಗಿಯುವ ದಿನಾಂಕ  ಪರಿಶೀಲಿಸಿ ಮತ್ತು ಲೇಬಲ್​ಗಳನ್ನು ಎಚ್ಚರಿಕೆಯಿಂದ ಓದಿ.

Spread the love

LEAVE A REPLY

Please enter your comment!
Please enter your name here