ತುಮಕೂರು:- ನನಗೆ ಮತ್ತೆ ಮಂತ್ರಿಗಿರಿ ಸಿಗುವ ನಿರೀಕ್ಷೆ ಇದೆ.. ಏನೇ ಆಗಲಿ ಬಿಹಾರ ಎಲೆಕ್ಷನ್ ತನಕ ಸುಮ್ಮನಿದ್ದುಬಿಡಿ ಎಂದು ಮಾಜಿ ಸಚಿವ ರಾಜಣ್ಣ ಮಾರ್ಮಿಕ ನುಡಿಗಳನ್ನಾಡಿದರು.
ಮತ್ತೆ ನೀವು ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ ತುಮಕೂರಿನಲ್ಲಿ ಮಾತನಾಡಿದ ಅವರು, ಬಿಹಾರ ಚುನಾವಣೆವರೆಗೂ ಕಾದು ನೋಡಿ ಎಂದಷ್ಟೇ ಹೇಳಿದ್ದಾರೆ. ಕೆಎನ್ ರಾಜಣ್ಣರ ಈ ಮಾತಿನ ಮರ್ಮ ಹಲವು ಚರ್ಚೆಗೆ ಗ್ರಾಸವಾಗಿದೆ.
ಅಲ್ಲದೇ ಸಿಎಂ ಸಿದ್ದರಾಮಯ್ಯರ ಬಗ್ಗೆ ನನಗೆ ವಿಶ್ವಾಸ ಇದೆ. ಮತ್ತೆ ಮಂತ್ರಿಗಿರಿ ಸಿಗಬಹುದು ಅನ್ನೋದನ್ನೂ ಪರೋಕ್ಷವಾಗಿ ಹೇಳಿದ್ದಾರೆ. ಮಂತ್ರಿ ಸ್ಥಾನ ಕೊಡಿ ಎಂದು ನಾನು ಕೇಳಿರಲಿಲ್ಲ. 2018 ರಲ್ಲಿ ನಾನು ಸೋತಾಗ ಸಿಎಂ ಸಿದ್ದರಾಮಯ್ಯ ಹೇಳಿದ್ರು ನೀನು ಗೆದ್ದರೆ ಮಿನಿಸ್ಟರ್ ಆಗ್ತಿದ್ದೆ ಕಣಯ್ಯಾ, ನಿನ್ನ ಬದಲು ತುಕಾರಂನನ್ನು ಮಾಡಿದೆ ಎಂದು ಹೇಳಿದರು. ಈ ಬಾರಿ ಅವರೇ ಕರೆದು ಸಚಿವ ಸ್ಥಾನ ಕೊಟ್ಟರು ಎಂದರು.
ಹೈಕಮಾಂಡ್‌ಗೆ ಸತ್ಯದ ಅರಿವಾಗಿದ್ಯಾ ಎಂಬ ಪ್ರಶ್ನೆಗೂ ಉತ್ತರಿಸಿದ ರಾಜಣ್ಣ, ಎಲ್ಲವೂ ಬಿಹಾರ ಎಲೆಕ್ಷನ್ ಕಳೆದ ಮೇಲೆಯೇ ಗೊತ್ತಾಗುತ್ತದೆ ಎಂದು ಹೇಳಿದರು.