ನರೇಗಾ ಕೂಲಿಕಾರರ ಸಬಲೀಕರಣದತ್ತ ಆಡಳಿತ

0
Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಗಜೇಂದ್ರಗಡ ತಾಲೂಕಿನಲ್ಲಿ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿಕಾರರ ಇ-ಕೆವೈಸಿ ಕಾರ್ಯ ಪ್ರಗತಿಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಗುರುವಾರ ಬೆಳಿಗ್ಗೆ ಪರಿಶೀಲಿಸಿದರು.

Advertisement

ಇಟಗಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು, ನರೇಗಾ ಕೂಲಿಕಾರರ ಆಧಾರ್ ಆಧಾರಿತ ಇ-ಕೆವೈಸಿ ಪ್ರಕ್ರಿಯೆ ಹೇಗೆ ನಡೆಯುತ್ತಿದೆ ಎಂಬುದನ್ನು ಪರಿಶೀಲಿಸಿ, ಕಾರ್ಯನಿರ್ವಹಿಸುತ್ತಿದ್ದ ಬಿಎಫ್‌ಟಿ, ಡಿಇಒ ಮತ್ತು ಗ್ರಾಮ ಕಾಯಕ ಮಿತ್ರರ ಕೆಲಸವನ್ನು ಅವಲೋಕಿಸಿ, ಪ್ರತಿದಿನ ನಿಗದಿತ ಗುರಿಯಂತೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಿದರು.

ನರೇಗಾ ಯೋಜನೆಯಡಿ ಮುಂದಿನ ದಿನಗಳಲ್ಲಿ ಕೂಲಿಕಾರರು ಕೆಲಸ ಪಡೆಯಬೇಕಾದರೆ ಇ-ಕೆವೈಸಿ ಕಡ್ಡಾಯವಾಗಿದೆ. ನಮ್ಮ ಗ್ರಾ.ಪಂ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ಈ ಕಾರ್ಯವನ್ನು ಶ್ರಮಪೂರ್ವಕವಾಗಿ ಮಾಡುತ್ತಿದ್ದಾರೆ. ಇದರ ಪ್ರಯೋಜನವನ್ನು ಎಲ್ಲ ಕೂಲಿಕಾರರು ಪಡೆಯಬೇಕು ಎಂದು ಹೇಳಿದರು.

ಗ್ರಾ.ಪಂ ಸಿಬ್ಬಂದಿ ಮನೆಗೆ ಬಂದಾಗ ಅಗತ್ಯ ದಾಖಲೆ, ಆಧಾರ್ ಮತ್ತು ಬ್ಯಾಂಕ್ ವಿವರ ನೀಡುವ ಮೂಲಕ ಎಲ್ಲರೂ ಸಹಕಾರ ನೀಡಬೇಕು. ತಾಲೂಕಿನಲ್ಲಿ ಶೇ. 100 ರಷ್ಟು ಇ-ಕೆವೈಸಿ ಸಾಧಿಸುವುದು ನಮ್ಮ ಗುರಿ ಎಂದು ಕೂಲಿಕಾರರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಇಟಗಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು (PDO), ಪಂಚಾಯತ್ ಸದಸ್ಯರು, ನರೇಗಾ ಸಿಬ್ಬಂದಿ ಹಾಗೂ ಗ್ರಾ.ಪಂ ಸಿಬ್ಬಂದಿ ವರ್ಗದವರು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here