ಬಲೂನ್ ಮಾರುವ ಬಾಲಕಿ ಅತ್ಯಾಚಾರ, ಕೊಲೆ: ಆರೋಪಿಗೆ ಪೊಲೀಸ್ ಗುಂಡೇಟು

0
Spread the love

ಮೈಸೂರು: ಮೈಸೂರು ದಸರಾ ಸಂಭ್ರಮದ ನಡುವೆ ನಡೆದ ಪೈಶಾಚಿಕ ಘಟನೆಗೆ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕುಟುಂಬದ ಜೊತೆ ಮೈಸೂರು ದಸರಾ ಹಬ್ಬದ ವೇಳೆ ಬಲೂನು ಮಾರಾಟ ಮಾಡಲು ಬಂದಿದ್ದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಯಾಗಿದ್ದು,

Advertisement

ಈ ಸಂಬಂಧ ಪೊಲೀಸರು ಸಿಸಿಟಿವಿ ಆಧರಿಸಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ತಪ್ಪಿಸಿಕೊಳ್ಳಲು ಯತ್ನಿಸಿದ ಕೀಚಕನಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.  ದ್ದಾರೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಕಾರ್ತಿಕ್​ನನ್ನು ಕೊಳ್ಳೇಗಾಲದಲ್ಲಿ ವಶಕ್ಕೆ ಪಡೆದಿದ್ದ ಪೊಲೀಸರು, ಮೈಸೂರಿಗೆ ಕರೆದುಕೊಂಡು ಬಂದು ಪ್ರಾಥಮಿಕ ವಿಚಾರಣೆ ನಡೆಸಿದ್ದರು.

ಬಳಿಕ ಹೆಚ್ಚಿನ ವಿಚಾರಣೆಗಾಗಿ ಪುನಃ ಈತನ ಊರಾದ ಸಿದ್ದಲಿಂಗಪುರಕ್ಕೆ ಕರೆದುಕೊಂಡು ಹೋಗಿ ವಾಪಸ್ ಬರುತ್ತಿದ್ದರು. ಈ ವೇಳೆ ಮೇಟಗಳ್ಳಿ ಬಳಿ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟು ತಗುಲಿದ ನಂತರ,

ಆರೋಪಿ ಕಾರ್ತಿಕ್‌ನನ್ನು ತಕ್ಷಣವೇ ಕೆ.ಆರ್‌. ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕಾರ್ಯಾಚರಣೆಯ ವೇಳೆ ಇಬ್ಬರು ಪೊಲೀಸರಿಗೂ ಗಾಯಗಳಾಗಿವೆ. ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಭೇಟಿ ಮಾಹಿತಿ ಪಡೆದುಕೊಂಡರು.


Spread the love

LEAVE A REPLY

Please enter your comment!
Please enter your name here