I Miss You Chinna ಎನ್ನುತ್ತಲೇ ನೇಣಿಗೆ ಶರಣಾದ 18ರ ಯುವಕ!

0
Spread the love

ಚಿಕ್ಕಬಳ್ಳಾಪುರ: ತಾಲೂಕಿನ ಬಾಲಕುಂಟಹಳ್ಳಿ ಗ್ರಾಮದ ಬಳಿ ಅಪ್ರಾಪ್ತೆಯೊಂದಿಗಿನ ಪ್ರೇಮ ವೈಫಲ್ಯದಿಂದ ಯುವಕ ನೇಣಿಗೆ ಶರಣಾಗಿರುವ ಘಟನೆ ಜರುಗಿದೆ.

Advertisement

18 ವರ್ಷದ ಚಿರುತ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಅಂದಹಾಗೆ ಸಾಯುವ ಮುನ್ನ ʻಮಿಸ್ ಯು ಚಿನ್ನʼ ಅಂತ ಆಕೆಯೊಂದಿಗಿನ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಆಕೆಯ ವೇಲ್‌ನಿಂದಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

SSLCನಲ್ಲಿ ಒಂದಲ್ಲ ಎರಡಲ್ಲ ಅಂತ ಮೂರು ಬಾರಿ ಫೇಲ್ ಆಗಿದ್ದ ಚಿರುತ್ ಊರಲ್ಲೇ ಕೃಷಿ ಕೆಲಸ ಮಾಡಿಕೊಂಡಿದ್ದ. ಆದ್ರೆ ಚಿರುತ್ ಕುಮಾರ್ ಇದ್ದಕ್ಕಿದ್ದಂತೆ ಜಕ್ಕಲಮಡುಗು ಜಲಾಶಯದ ಬಳಿ ಜಮೀನು ಪಕ್ಕದಲ್ಲೇ ಇದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಂದಹಾಗೆ ತಂದೆ ತಾಯಿಗೆ ಒಬ್ಬನೇ ಮಗನಾಗಿದ್ದ ಚಿರುತ್ ಕುಮಾರ್ ಅದ್ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದ ಅನ್ನೋದು ಆರಂಭದಲ್ಲಿ ಸಂಬಂಧಿಕರಿಗೂ ಗೊತ್ತಾಗಿರಲಿಲ್ಲ. ಕೊನಗೆ ಆತನ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳನ್ನ ಜಾಲಾಡಿದಾಗ ಆತ ಸಾಯುವ ಮುನ್ನ ಅಪ್ರಾಪ್ತ ಬಾಲಕಿಯೊಂದಿಗೆ ಇರುವ ಫೋಟೋಗಳನ್ನ ಹಾಕಿಕೊಂಡಿದ್ದಾನೆ. ಇದ್ರಿಂದ ಪ್ರೇಮ ವೈಫಲ್ಯದಿಂದಲೇ ಚಿರುತ್ ಕುಮಾರ್ ಸೂಸೈಡ್ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಈ ಹಿಂದೆಯೂ ಎರಡು ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಸಾಯುವುದಾಗಿ ಚಿರುತ್ ಕುಮಾರ್ ಪೋಸ್ಟ್ ಮಾಡಿದ್ದನಂತೆ. ಆಗ ಸ್ನೇಹಿತರೇ ಹೋಗಿ ಅವನಿಗೆ ಬುದ್ದಿ ಮಾತು ಹೇಳಿ ಮನೆಗೆ ಕರೆದುಕೊಂಡು ಬಂದಿದ್ರಂತೆ. ಆದ್ರೆ ಮೂರನೇ ಬಾರಿ ಸೂಸೈಡ್ ಮಾಡಿಕೊಂಡು ಸಾವಿನ ಮನೆ ಸೇರಿಕೊಂಡಿದ್ದಾನೆ.

ಇನ್ನೂ ಅಪ್ರಾಪ್ತ ಬಾಲಕಿ, ಚಿರುತ್‌ನನ್ನ ಬಿಟ್ಟು ಬೇರೆ ಯಾರೋ ಹುಡುಗನನ್ನ ಪ್ರೀತಿ ಮಾಡುತ್ತಿದ್ದಳಂತೆ, ಚಿರುತ್ ಫೋನ್‌ ರಿಸೀವ್ ಮಾಡದೇ ಅವಾಯ್ಡ್‌ ಮಾಡಿದ್ಲಂತೆ. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ಆಪ್ತ ಸ್ನೇಹಿತರು ಬಳಗದಿಂದ ಮಾಹಿತಿ ಲಭ್ಯವಾಗಿದೆ.


Spread the love

LEAVE A REPLY

Please enter your comment!
Please enter your name here