ಬಾಣಂತಿಯರು ಪೌಷ್ಠಿಕ ಆಹಾರ ಸೇವಿಸಿ: ಸಿ.ಎಸ್. ಶಿವನಗೌಡರ 

0
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 4718592;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 46;
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗದಗ ಹಾಗೂ ಶಿಶು ಅಭಿವೃದ್ಧಿ ಯೋಜನೆ ಗದಗ ಇವರ ಸಂಯುಕ್ತ ಆಶ್ರಯದಲ್ಲಿ ಗದಗ ತಾಲ್ಲೂಕಿನ ಜಾಕಿರಹುಸೇನ್ ಸಮುದಾಯ ಭವನದಲ್ಲಿ ಶುಕ್ರವಾರ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪೋಷಣ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

Advertisement

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳು, ಗರ್ಭಿಣಿ, ಬಾಣಂತಿಯರು ಪೌಷ್ಠಿಕ ಆಹಾರವನ್ನು ಸರಿಯಾಗಿ ಸೇವಿಸಬೇಕು. ನಮ್ಮ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು. ಇದರಿಂದ ರೋಗ-ರುಜಿನಗಳನ್ನು ತಡೆಗಟ್ಟಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.

ವೈದ್ಯಾಧಿಕಾರಿ ಡಾ. ಗಡಾದ ಮಾತನಾಡಿ, ಪೋಷಣ ಮಾಸಾಚರಣೆಯ ಇತಿಹಾಸದ ಕುರಿತು ಹಾಗೂ ಸ್ವಸ್ಥ ನಾರಿ ಸಶಕ್ತ ಪರಿವಾರ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ನಿರೂಪಣಾಧಿಕಾರಿ ರಾಧಾ ಜಿ. ಮಣ್ಣೂರ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಖಾ ಮಲ್ಲಾಪೂರ, ಪೋಷಣ ಜಿಲ್ಲಾ ಸಂಯೋಜಕರಾದ ಸಂಗೀತಾ ಹೂಗಾರ, ಪೋಷಣ ಜಿಲ್ಲಾ ಕಾರ್ಯಕ್ರಮ ಸಹಾಯಕ ಪವನ ಕಾಟೀಗರ, ಪೋಷಣ ತಾಲ್ಲೂಕು ಸಂಯೋಜಕರಾದ ಕಾವೇರಿ ಚೇಗೂರ, ಯೋಜನೆಯ ಎಲ್ಲಾ ವಲಯ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಗರ್ಭಿಣಿಯರು, ತಾಯಂದಿರು ಭಾಗವಹಿಸಿದ್ದರು.

ಫಾತಿಮಾ ಚುಳ್ಕಿ ಸ್ವಾಗತಿಸಿದರು. ರುಕ್ಮಿಣಿ ದೇವಪೂರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ ಮಾತನಾಡಿ, ಸೆಪ್ಟೆಂಬರ್ ತಿಂಗಳಿನಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಬೊಜ್ಜುತನ ನಿವಾರಣೆ, ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವುದು, ಪೋಷಣ ಭಿ-ಪಠಾಯಿ ಭಿ, ಶಿಶು, ಚಿಕ್ಕ ಮಕ್ಕಳ ಆಹಾರ ಅಭ್ಯಾಸಗಳು, ಪುರುಷರ ಸಹಭಾಗಿತ್ವ ಹಾಗೂ ಇಲಾಖೆಯ ವಿವಿಧ ಯೋಜನೆಯ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.


Spread the love

LEAVE A REPLY

Please enter your comment!
Please enter your name here