ಕಲಬುರ್ಗಿ:- ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಜಿಲ್ಲಾ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಗಲ್ಲು ಶಿಕ್ಷೆಗೆ ಒಳಗಾದ ಅಪರಾಧಿಗಳನ್ನು ಇಬ್ರಾಹಿಂ ಸಾಬ್(31) ಮತ್ತು ಅಕ್ಬರ್(28) ಎಂದು ಗುರುತಿಸಲಾಗಿದೆ. ಹಾಗೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾನು ಬೇಗಂ ತಾಯಿ ಮತ್ತು ಕುಟುಂಬದ ಐವರು ಸದಸ್ಯರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
2017ರಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗುಂಡಕನಲ್ ಗ್ರಾಮದಲ್ಲಿ ದಲಿತ ಯುವಕ ಸಾಯಿಬಣ್ಣನನ್ನು ಪ್ರೀತಿಸಿ ಬಾನು ಬೇಗಂ ಮದುವೆಯಾಗಿದ್ದಳು. 9 ತಿಂಗಳ ಗರ್ಭಿಣಿ ಆಗಿದ್ದ ಬಾನು ಬೇಗಂ ಅನ್ನು ಸಹೋದರರು ಬೆಂಕಿ ಹಚ್ಚಿ ಕೊಂದಿದ್ದರು. ಬಸವನಬಾಗೇವಾಡಿ ಪೊಲೀಸರು ತನಿಖೆ ನಡೆಸಿ ಚಾರ್ಜ್‌ಶಿಟ್ ಸಲ್ಲಿಸಿದರು. ವಿಚಾರಣೆ ನಡೆಸಿದ ವಿಜಯಪುರ ಜಿಲ್ಲಾ ಕೋರ್ಟ್ ಈ ಇಬ್ಬರು ಸಹೋದರರಿಗೆ ಮರಣದಂಡನ ಶಿಕ್ಷೆ ಹಾಗೂ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಬಳಿಕ ಕಲಬುರಗಿ ಹೈಕೋರ್ಟ್ ಪೀಠಕ್ಕೆ ಅಪರಾಧಿಗಳು ಮೇಲ್ಮನವಿ ಸಲ್ಲಿಸಿದ್ದರು.
ಇದೀಗ ಕಲಬುರಗಿ ಹೈಕೋರ್ಟ್ನ ದ್ವಿಸದಸ್ಯ ಪೀಠ ಈ ತೀರ್ಪುನ್ನು ಮಾನ್ಯ ಮಾಡಿದೆ. ಆ ಮೂಲಕ ಇಬ್ಬರು ಅಪರಾಧಿಗಳಿಗೆ ಗಲ್ಲು ಖಾಯಂಗೊಳಿಸಿ ಕೊಲೆಯಾದ ಬಾನು ಬೇಗಂನ ತಾಯಿ ಹಾಗೂ ಕುಟುಂಬದ ಐವರು ಸದಸ್ಯರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.