ರಾಮನಗರ:– ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ 7 ಕಾರ್ಮಿಕರ ಪೈಕಿ, 4 ಮಂದಿ ಕಾರ್ಮಿಕರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬಿಡದಿ ಸಮೀಪದ ಬೀಮೇನಹಳ್ಳಿ ಬಳಿ ಜರುಗಿದೆ.
ಜಾಯಿದ್ ಅಲಿ, ಶಪೀಜುಲ್ ಶೇಕ್, ಮನ್ರೂಲ್ ಶೇಕ್, ಜಿಯಾಬುರ್ ಶೇಕ್ ಮೃತ ಕಾರ್ಮಿಕರು. ಮಂಗಳವಾರ ಶೆಡ್‌ನಲ್ಲಿ ಗ್ಯಾಸ್ ಲೀಕ್ ಆಗಿ ಈ ಅಗ್ನಿ ಅವಘಡ ಸಂಭವಿಸಿತ್ತು. ಈ ಅವಘಡದಲ್ಲಿ 7 ಮಂದಿಗೆ ಸುಟ್ಟಗಾಯಗಳಾಗಿದ್ದವು. ಗಾಯಾಳುಗಳನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗಾಯಗೊಂಡ ಮೂವರು ಕಾರ್ಮಿಕರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಘಟನೆಗೆ ಕಟ್ಟಡ ನಿರ್ಮಾಣ ಸಂಸ್ಥೆಯ ನಿರ್ಲಕ್ಷ್ಯ ಕಾರಣ ಎಂದು ಕಾರ್ಮಿಕ ಸಂಘಟನೆಗಳು ಆರೋಪಿಸಿವೆ. ಸೂಕ್ತ ಪರಿಹಾರಕ್ಕೆ ಒತ್ತಾಯಿಸಿವೆ.



