ಹಾವೇರಿ:- ಹೊಸಬರಿಗೆ ಸಚಿವಸ್ಥಾನ ಕೊಡುವ ಬಗ್ಗೆ ಪಕ್ಷದಲ್ಲಿ ಚಿಂತನೆ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಸಂಪುಟ ಪುನಾರಚನೆ ಗುಟ್ಟು ಬಿಚ್ಚಿಟ್ಟಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್, ಸಚಿವ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಮತ್ತು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ. ಆದರೆ ಅಂತಿಮ ತೀರ್ಮಾನ ಹೈಕಮಾಂಡ್ ನಾಯಕರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.
2023ರಲ್ಲಿ ಸರ್ಕಾರ ರಚನೆಯಾದಾಗಲೇ ನಾನು ಸಂಪುಟದಲ್ಲಿರಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಪಟ್ಟಿಯಿಂದ ನನ್ನ ಹೆಸರು ಕೈಬಿಡಲಾಗಿತ್ತು. ಕಳೆದ 43 ವರ್ಷಗಳಿಂದ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ಸಂಪುಟ ಪುನಾರಚನೆ ವೇಳೆ ನನಗೆ ಅವಕಾಶ ಸಿಗುವ ವಿಶ್ವಾಸವಿದೆ ಎಂದಿದ್ದಾರೆ.



