ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ನಗರದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಜರುಗಿದ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹುಲಕೋಟಿಯ ಜಿ.ಸಿ.ಟಿ.ಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಶಿವಪ್ಪ ಬಸವರಾಜ ಕರಿಕಟ್ಟಿ 200 ಮೀಟರ್ ಫ್ರೀ ಸ್ಟೈಲ್ ಈಜು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿಯವರು, ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ.



