ಬೆಂಗಳೂರು: ಆಪ್ತ ಸಚಿವರನ್ನ ಸಿಎಂ ಸಿದ್ದರಾಮಯ್ಯ ಔತಣಕೂಟ ಸಭೆಗೆ ಆಹ್ವಾನಿಸಿದ್ದಾರೆ ಎನ್ನಲಾಗ್ತಿದೆ. ಈ ಸಭೆಯಲ್ಲಿ ಸಂಪುಟ ಪುನಾರಚನೆ, ಅಧಿಕಾರ ಹಂಚಿಕೆ ಹೇಳಿಕೆ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸಿಎಂ ಸಂಪುಟ ಪುನಾರಚನೆಯ ಲೆಕ್ಕಾಚಾರ ಹಾಕಿದ್ದಾರೆ ಎನ್ನಲಾಗಿದೆ.
Advertisement
ಈ ನಡುವೆ ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಗರಂ ಆದರು.