ಉಡುಪಿ: ಕಾಂಗ್ರೆಸ್ನ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ನಡೆದಿದೆ. ಸುದೀಪ್ ಭಂಡಾರಿ ಮೃತ ದುರ್ಧೈವಿಯಾಗಿದ್ದು,
ಕಾಂಗ್ರೆಸ್ನ ಮಾಜಿ ಶಾಸಕ ದಿ.ಹುಟ್ಟುರ್ಕೆ ಗೋಪಾಲ್ ಭಂಡಾರಿ ಅವರು 1999-2004 ಮತ್ತು 2008-2013 ರಲ್ಲಿ ಕಾರ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು . ಇದೀಗ ಅವರ ಪುತ್ರ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸುತ್ತಿದ್ದರು.
ಮೃತರಿಗೆ ತಾಯಿ, ಒಬ್ಬ ಸಹೋದರ ಮತ್ತು ಒಬ್ಬ ಸಹೋದರಿ, ಪತ್ನಿ, ಇಬ್ಬರು ಮಕ್ಕಳಿದ್ದರು ಎಂದು ಹೇಳಲಾಗುತ್ತಿದೆ. ಅವರ ಸಾವಿಗೆ ನಿರ್ದಿಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಈ ಘಟನೆ ಹಿನ್ನೆಲೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.