ಬೆಂಗಳೂರು: ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳಿಗೆ ಅನುಮತಿ ಕೊಡಬಾರದು. ಪ್ರಿಯಾಂಕ್ ಖರ್ಗೆ ಬರೆದ ಪತ್ರ ಸರಿಯಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Advertisement
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ ಒಂದು ರಾಜಕೀಯ ಸಂಘಟನೆ, ಸಾಮಾಜಿಕ ಸಂಘಟನೆಯಲ್ಲ. ಸರ್ಕಾರಿ ನೌಕರರು ರಾಜಕೀಯ ಸಂಘಟನೆಗಳ ಚಟುವಟಿಕೆಯಲ್ಲಿ ಭಾಗವಹಿಸಬಾರದು. ಅದಕ್ಕಾಗಿ ಆರ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಬೇಕು ಎಂದು ಅವರು ಹೇಳಿದರು.
ಸರ್ಕಾರಗಳನ್ನು ತೆಗೆಯುವಲ್ಲಿ, ಸರ್ಕಾರ ರಚನೆ ಮಾಡುವಲ್ಲಿ, ಮಂತ್ರಿ ಮಂಡಳ ರಚನೆಯಲ್ಲಿ ಆರ್‌ಎಸ್‌ಎಸ್ ನಾಯಕರು ಭಾಗಿಯಾಗುತ್ತಾರೆ. ಚುನಾವಣೆಯಲ್ಲೂ ಸಂಘದ ನಾಯಕರು ಸ್ಪರ್ಧಿಸುತ್ತಾರೆ. ಈ ಕಾರಣಕ್ಕೆ ಸರ್ಕಾರಿ ನೌಕರರು ಆರ್‌ಎಸ್‌ಎಸ್ ಚಟುವಟಿಕೆಯಲ್ಲಿ ಭಾಗವಹಿಸುವುದನ್ನು ನಿಷೇಧಿಸಬೇಕು ಎಂದು ಹೇಳಿದರು.