ಉಡುಪಿ:- ಜಿಲ್ಲೆಯ ಬೈಂದೂರು ತಾಲೂಕಿನ ಕಿರುಮಂಜೇಶ್ವರದಲ್ಲಿ ನಡೆದ ದುರಂತದಲ್ಲಿ ಮೂವರು ಬಾಲಕರು ನೀರುಪಾಲಾಗಿದ್ದಾರೆ.
Advertisement
ಈಜಲು ತೆರಳಿದ್ದ ನಾಲ್ವರಲ್ಲಿ ಒಬ್ಬ ಯುವಕ ಪಾರಾಗಿದ್ದು, ಮೂವರು ದುರ್ಮರಣ ಹೊಂದಿದ್ದಾರೆ.
ಮೃತರಾದವರು ಸಂಕೇತ್ (16), ಸೂರಜ್ (15) ಮತ್ತು ಆಶೀಶ್ (14) ಎಂದು ಗುರುತಿಸಲಾಗಿದೆ.
ನೀರುಪಾಲಾದ ಮೂವರೂ ಸ್ಥಳೀಯ ನಿವಾಸಿಗಳು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.