ವಿಜಯಪುರ: ಇಟ್ಟಿಗೆಯಿಂದ ತಲೆಗೆ ಹೊಡೆದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ ನಗರದ ಸಿಂದಗಿ ರಸ್ತೆಗೆ ಹೊಂದಿಕೊಂಡಿರುವ ಅಲ್ಲಾಪುರ ಓಣಿಯಲ್ಲಿ ನಡೆದಿದೆ. ಇಬ್ಬರಿಂದ ಈ ಕೃತ್ಯ ಎಸಗಲಾಗಿದೆ. ರಕ್ತದ ಮಡುವಿನಲ್ಲಿ ಯುವಕನ ಶವ ಪತ್ತೆಯಾಗಿದ್ದು, ಮೃತನ ಗುರುತು ಪತ್ತೆಗೆ ಪೊಲೀಸರು ಶ್ರಮಿಸುತ್ತಿದ್ದಾರೆ.
ಕುಡಿದು ಮತ್ತಿನಲ್ಲಿ ಜಗಳ ನಡೆದಿದ್ದು, ಅದರ ಬಳಿಕ ಚಾಕು ಇರಿದು ಹಾಗೂ ಇಟ್ಟಿಗೆಯಿಂದ ಹೊಡೆದು ಕೊಲೆಗೈದಿರೋ ಶಂಕೆ ವ್ಯಕ್ತವಾಗಿದೆ. ಘಟನೆಯ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಗೋಳಗುಮ್ಮಟ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ತನಿಖೆ ಮುಂದುವರಿದಿದೆ.



