Gold-Silver Price: ಚಿನ್ನದ ಬೆಲೆ ಏರಿಕೆ, ಬೆಳ್ಳಿ ಬೆಲೆ ಇಳಿಕೆ: ಇಂದಿನ 10 ಗ್ರಾಂ ಬಂಗಾರದ ಬೆಲೆ ಎಷ್ಟು?

0
Spread the love

ಪ್ರಪಂಚಾದ್ಯಂತ ಚಿನ್ನಕ್ಕೆ ಎಲ್ಲೆಡೆ ಮನ್ನಣೆಯಿದ್ದು ಎಲ್ಲ ದೇಶಗಳಿಂದಲೂ ಸ್ವೀಕರಿಸಲ್ಪಡುತ್ತದೆ. ಅದರಲ್ಲೂ ಭಾರತದಂತಹ ದೇಶದಲ್ಲಿ ಚಿನ್ನ ತನ್ನದೆ ಆದ ದೊಡ್ಡ ಮಾರುಕಟ್ಟೆಯನ್ನು ಹೊಂದಿದೆ. ನಿತ್ಯ ಕೋಟ್ಯಂತರ ರೂಪಾಯಿಗಳಷ್ಟು ವ್ಯಾಪಾರ ವಹಿವಾಟು ಹೊಂದಿದೆ.

Advertisement

ಇನ್ನು ಚಿನ್ನದ ಬೆಲೆಯೂ ಸಹ ಒಂದೇ ಸಮನಾಗಿರದೆ ಹಲವು ಅಂಶಗಳಿಂದಾಗಿ ಅದರ ಬೆಲೆ ಪ್ರಭಾವಿಸಲ್ಪಡುತ್ತಿರುತ್ತದೆ. ಅಂತೆಯೇ ಹೂಡಿಕೆದಾರರಿಗೆ ಹಾಗೂ ಆಭರಣ ಕೊಳ್ಳಬಯಸುವವರಿಗೆ ನಿತ್ಯದ ಬೆಲೆ ಅಪ್ಡೇಟ್ ಉಪಯುಕ್ತವಾಗಿರುತ್ತದೆ.

ಸತತವಾಗಿ ಭರ್ಜರಿ ಏರಿಕೆ ಕಾಣುತ್ತಾ ಬಂದಿರುವ ಬೆಳ್ಳಿ ಬೆಲೆ ಇಂದು ಗುರುವಾರ 1 ರೂ ಕಡಿಮೆ ಆಗಿದೆ. ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 11,815 ರೂನಿಂದ 11,865 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 12,944 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 194 ರೂ ಆಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,18,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,29,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 18,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,18,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 19,400 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 20,600 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 16ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,944 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,865 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,708 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 189 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,944 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,865 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 194 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,865 ರೂ
  • ಚೆನ್ನೈ: 11,865 ರೂ
  • ಮುಂಬೈ: 11,865 ರೂ
  • ದೆಹಲಿ: 11,880 ರೂ
  • ಕೋಲ್ಕತಾ: 11,865 ರೂ
  • ಕೇರಳ: 11,865 ರೂ
  • ಅಹ್ಮದಾಬಾದ್: 11,870 ರೂ
  • ಜೈಪುರ್: 11,880 ರೂ
  • ಲಕ್ನೋ: 11,880 ರೂ
  • ಭುವನೇಶ್ವರ್: 11,865 ರೂ

Spread the love

LEAVE A REPLY

Please enter your comment!
Please enter your name here