RSS ಕಾರ್ಯಕ್ರಮದಲ್ಲಿ ಭಾಗಿಯಾದ ಸರ್ಕಾರಿ ನೌಕರರ ಅಮಾನತು: ಸಚಿವ ಪ್ರಿಯಾಂಕ್ ಖರ್ಗೆ

0
Spread the love

ಬೆಂಗಳೂರು: RSS ಕಾರ್ಯಕ್ರಮದಲ್ಲಿ ಪಾಲ್ಗೊಂಡ ನೌಕರರನ್ನು ಅಮಾನತು ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರು ಕೆಲಸ ಮಾಡುತ್ತಾರೆ ಅಂದುಕೊಂಡಿದ್ದೇವೆ.

Advertisement

ಆದರೆ, ಅವರು ನಮಗಿಂತಲೂ ಹೆಚ್ಚು ರಾಜಕೀಯದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸರ್ಕಾರಿ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಷಣ ಮಾಡುವುದಲ್ಲದೆ, ಬೇರೆ ರೀತಿಯಲ್ಲೂ ಪಾಲ್ಗೊಂಡಿದ್ದಾರೆ. ಇದರಲ್ಲಿ ನಮ್ಮ ಇಲಾಖೆಯ ಕೆಲವರಿದ್ದಾರೆ. ಈ ಸಂಬಂಧ ವರದಿ ತರಿಸಿಕೊಳ್ಳುತ್ತಿದ್ದು, ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.‌

ನಾನು ಯಾವತ್ತೂ ಒಂದು ಸಂಸ್ಥೆ ಅಂತ ಹೇಳಿಲ್ಲ.‌ ಇಂತಹ ಯಾವುದೇ ಸಂಸ್ಥೆ ಇರಲಿ, 2013ರಲ್ಲಿ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಕಾರ್ಯಕ್ರಮ ನಡೆಸಬಾರದು ಎಂಬ ಸುತ್ತೋಲೆ ಹೊರಡಿಸಿದ್ದರು. ಹಲವು ಇಲಾಖೆಗಳು ಈ ಹಿಂದೆ ಈ ನಿಟ್ಟಿನಲ್ಲಿ ಆರ್ಡರ್ ಮಾಡಿವೆ.

ಹಾಗಾಗಿ ಅವರು ಆರ್​​ಎಸ್ಎಸ್ ವಿರೋಧಿಗಳಾ?. ಇವತ್ತು ಹಲವು ಲೋಪಗಳಿವೆ, ಅದಕ್ಕಾಗಿಯೇ ಇವರೆಲ್ಲರೂ ಬೆಳೆದಿದ್ದಾರೆ. ಸರ್ದಾರ್ ಪಟೇಲ್, ಇಂದಿರಾ ಗಾಂಧಿ ಆರ್​ಎಸ್​ಎಸ್ ಬ್ಯಾನ್ ಮಾಡಲು ಸಾಧ್ಯವಾಗಿಲ್ಲ ಅಂತಾರೆ.‌ ಹೌದು ಆವತ್ತು ನಿಷೇಧ ವಾಪಸ್ ಪಡೆದಿದ್ದು ಸರಿಯಲ್ಲ ಅಂತ ನಾವು ಹೇಳುತ್ತೇವೆ ಎಂದರು.‌


Spread the love

LEAVE A REPLY

Please enter your comment!
Please enter your name here