ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿರಹಟ್ಟಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಅನುದಾನ ಕಲ್ಪಿಸುವಂತೆ ಶಾಸಕ ಡಾ. ಚಂದ್ರು ಲಮಾಣಿ ಬೆಂಗಳೂರಿನಲ್ಲಿ ಪಿಡಬ್ಲೂಡಿ ಸಚಿವರಾದ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
ಶಿರಹಟ್ಟಿ ಮತಕ್ಷೇತ್ರದ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು, ಈ ಕ್ಷೇತ್ರದ ಲಕ್ಷ್ಮೇಶ್ವರ, ಶಿರಹಟ್ಟಿ, ಮುಂಡರಗಿ ತಾಲೂಕಿನಲ್ಲಿ ಬಹುತೇಕ ರಸ್ತೆಗಳು ಅತಿಯಾದ ಮಳೆಯಿಂದ ಸಂಪೂರ್ಣ ಹಾಳಾಗಿವೆ. ನಿತ್ಯದ ಸಾರಿಗೆ ವ್ಯವಸ್ಥೆ ಮತ್ತು ಜನಜೀವನದ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರಿದೆ. ರಸ್ತೆಗಳ ಅಭಿವೃದ್ಧಿಯಾಗಬೇಕು ಎಂಬುದು ಕ್ಷೇತ್ರದ ಜನರ ಒತ್ತಾಸೆಯಾಗಿದೆ. ಕ್ಷೇತ್ರದ ಅಭಿವೃದ್ಧಿಯ ಹಿತದೃಷ್ಟಿಯಿಂದ ಹೆಚ್ಚುವರಿ ಅನುದಾನ ಕಲ್ಪಿಸುವಂತೆ ಮನವಿ ಮಾಡಿದರು.
ರಸ್ತೆಗಳ ಅಭಿವೃದ್ಧಿಗೆ ಅನುದಾನ ಕಲ್ಪಿಸುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವರು, ಈಗಾಗಲೇ ಸೂರಣಿ-ಬೆಳ್ಳಟ್ಟಿ ಮತ್ತು ಸೂರಣಿ-ಬಾಲೆಹೊಸೂರು ರಸ್ತೆ ಅಭಿವೃದ್ಧಿಗೆ ಅನುದಾನ ಕಲ್ಪಿಸಿದ್ದು, ಮಳೆ ಬಿಡುವಾದ ನಂತರ ರಸ್ತೆ ಅಭಿವೃದ್ಧಿ ಕಾರ್ಯ ಪ್ರಾರಂಭಿಸಲಾಗುವುದು ಎಂದರು.



