HomeKarnataka NewsRSS ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ PDO ಅಮಾನತು!

RSS ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ PDO ಅಮಾನತು!

For Dai;y Updates Join Our whatsapp Group

Spread the love

ರಾಯಚೂರು: ನಿನ್ನೆಯಷ್ಟೆ ರಾಜ್ಯ ಸರ್ಕಾರ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹಾಕಿತ್ತು., ಇದೀಗ RSS ಪಥಸಂಚಲನದಲ್ಲಿ ಭಾಗಿಯಾದ ಆರೋಪದಡಿ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಪಿಡಿಓರನ್ನು ಅಮಾನತು ಮಾಡಲಾಗಿದೆ.

ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ. ಇದೇ ಅಕ್ಟೋಬರ್12 ರಂದು ಲಿಂಗಸುಗೂರು ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಶತಮಾನೋತ್ಸವದ ಹಿನ್ನೆಲೆಯಲ್ಲಿ ಪಂಥಸಂಚಲನ ಕಾರ್ಯಕ್ರಮ ನಡೆದಿತ್ತು.

ಈ ಪಥಸಂಚಲನದಲ್ಲಿ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಗಣವೇಷ ಧರಿಸಿ ಪ್ರವೀಣ್ ಭಾಗವಹಿಸಿದ್ದರು. ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಹಾಗೂ ಸರ್ಕಾರಿ ನೌಕರನ ತರವಲ್ಲದ ರೀತಿ ನಡೆದುಕೊಂಡಿದ್ದರಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!