ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ನಾಡದೇವತೆ ಹಾಸನಾಂಬೆಯ ದರ್ಶನೋತ್ಸವ ಬಹಳ ಅದ್ಧೂರಿಯಾಗಿ ನೆರವೇರುತ್ತಿದೆ. ದೇವಿಯ ದರ್ಶನ ಪಡೆಯಲು ಎಲ್ಲೆಲ್ಲಿಂದಲೋ ಜನರು ಆಗಮಿಸುತ್ತಿದ್ದಾರೆ. ಹಿಂದೆ ಸಿಎಂ ಸಿದ್ದರಾಮಯ್ಯ ಸಹ ಬಂದಿದ್ದರು. ಇದೀಗ ಅವರ ಪತ್ನಿ ಪಾರ್ವತಿಯವರು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ.
Advertisement
ತಮ್ಮ ಆಪ್ತರ ಜೊತೆ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಹಾಸನಾಂಬ ದೇವಿ ದರ್ಶನದ ನಂತರ ಸಿದ್ದೇಶ್ವರಸ್ವಾಮಿ ದರ್ಶನ ಪಡೆದು ತೆರಳಿದ್ದಾರೆ.ಇದೇ ಮೊದಲ ಬಾರಿಗೆ ಅವರು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ.