ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ 3 ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಪ್ರಾರಂಭಗೊಂಡಿದ್ದು, ಮೊದಲ ಪಂದ್ಯ ಪರ್ತ್ ಆಪ್ಟನ್ ಮೈದಾನದಲ್ಲಿ ನಡೆದಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಹೀನಾಯವಾಗಿ ಸೋತಿದೆ. ಸುಮಾರು ಆರು ತಿಂಗಳ ನಂತರ ಟೀಮ್ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳಲಿದ್ದರು.
Advertisement
ಆದ್ರೆ ಆತಿಥೇಯ ಆಸ್ಟ್ರೇಲಿಯಾ ತಂಡ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಮಳೆಯ ಅಡಚಣೆಯಿಂದಾಗಿ ಪಂದ್ಯವನ್ನು ತಲಾ 26 ಓವರ್‌ಗಳಿಗೆ ಇಳಿಸಲಾಗಿತ್ತು.ಭಾರತವನ್ನು ಮಣಿಸಿದ ಆಸ್ಟ್ರೇಲಿಯಾ ಸರಣಿಯಲ್ಲಿ 1-0 ಮುನ್ನಡೆ ಗಳಿಸಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾಗೆ ಹಲವು ಬಾರಿ ಮಳೆ ಅಡಚಣೆಯಾಯಿತು. ಓವರ್‌ಗಳ ಸಂಖ್ಯೆಯಲ್ಲಿ ಮೊದಲು 32 ಕ್ಕೆ ಇಳಿಸಲಾಯಿತು. ಮತ್ತೆ ಮಳೆ ಕಾರಣಕ್ಕೆ ಡಕ್ವರ್ತ್ ಲೂಯಿಸ್ ನಿಯಮದಡಿ 26ಕ್ಕೆ ಓವರ್‌ಗಳ ಸಂಖ್ಯೆ ಇಳಿಸಲಾಯಿತು.
ಟೀಂ ಇಂಡಿಯಾ ಬ್ಯಾಟಿಂಗ್ ವೈಫಲ್ಯದಿಂದ 26 ಓವರ್‌ಗೆ 130 ರನ್ ಗಳಿಸಿತು. ರೋಹಿತ್ ಶರ್ಮಾ (8), ಕ್ಯಾಪ್ಟನ್ ಶುಭಮನ್ ಗಿಲ್ (10), ಶ್ರೇಯಸ್ ಅಯ್ಯರ್ (11) ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದರು. ವಿರಾಟ್ ಕೊಹ್ಲಿ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದ್ದು ನಿರಾಸೆ ಮೂಡಿಸಿತು.
ಕೆ.ಎಲ್.ರಾಹುಲ್ 38, ಅಕ್ಷರ್ ಪಟೇಲ್ 31 ರನ್ ಗಳಿಸಿ ತಂಡವನ್ನು ಸವಾಲಿನ ಮೊತ್ತದತ್ತ ಮುನ್ನಡೆಸಿದರು. ವಾಷಿಂಗ್ಟನ್ ಸುಂದರ್ 10, ನಿತೀಶ್ ಕುಮಾರ್ ರೆಡ್ಡಿ 19 ರನ್ ಗಳಿಸಿದರು. ಅಂತಿಮವಾಗಿ ಟೀಂ ಇಂಡಿಯಾ 26 ಓವರ್‌ಗಳಿಗೆ 9 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿತು.
131 ರನ್ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಸುಲಭ ಗೆಲುವು ದಾಖಲಿಸಿತು. ತಂಡದ ಪರ ಮಿಚೆಲ್ ಮಾರ್ಷ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಔಟಾಗದೇ 46 ರನ್ ಗಳಿಸಿದರು. ಇವರಿಗೆ ಜೋಶ್ ಫಿಲಿಪ್ (37), ಮ್ಯಾಟ್ ರೆನ್ಶಾ (21) ಸಾಥ್ ನೀಡಿದರು. ಕೊನೆಗೆ ಆಸ್ಟ್ರೇಲಿಯಾ, ಭಾರತದ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿತು.