ಬೆಂಗಳೂರು:- ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳು — ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಒಳನಾಡು ಜಿಲ್ಲೆಗಳು — ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡು ಜಿಲ್ಲೆಗಳು — ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಮಳೆಯ ಮುನ್ಸೂಚನೆ ನೀಡಲಾಗಿದೆ.
ಇದರೆಡೆಗೆ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಣಹವಾಮಾನ ಮುಂದುವರಿಯುವ ನಿರೀಕ್ಷೆ ಇದೆ.
ಬೆಂಗಳೂರು ನಗರದಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗಾಳಿಯ ವೇಗ ಗಂಟೆಗೆ 13-15 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.