ಬಿ ಖಾತಾದಿಂದ ಎ ಖಾತಾ ಮಾಡಲು ಶೇ 5% ತೆರಿಗೆ ಮಧ್ಯಮ ವರ್ಗವನ್ನು ಸುಟ್ಟು ಹಾಕುತ್ತಿದೆ: ನಿಖಿಲ್

0
Spread the love

ಬೆಂಗಳೂರು: ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ ಕಾಂಗ್ರೆಸ್ ಮಹಾ ದೋಖಾ ಮಾಡುತ್ತಿದೆ. ನೀವು ಹಬ್ಬವನ್ನು ಸಂತೋಷದಿಂದ ಆಚರಿಸಿ, ಕಾಂಗ್ರೆಸ್ ಲೂಟಿಯ ವಿರುದ್ಧ ಜೆಡಿಎಸ್ ಹೋರಾಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

Advertisement

ಈ ಬಗ್ಗೆ ಟ್ವೀಟ್ ಮೂಲಕ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರುರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಶುಭೋದಯ ಬೆಂಗಳೂರು ! ಎಲ್ಲರಿಗೂ ದೀಪಾವಳಿಯ ಶುಭಾಶಯಗಳು ನೀವು ದೀಪ ಹಚ್ಚುತ್ತಿರುವಾಗ, ಕಾಂಗ್ರೆಸ್ ಬಿ ಖಾತಾದಿಂದ ಎ ಖಾತಾ ಮಾಡಲು 5% ತೆರಿಗೆಯಿಂದ ಮಧ್ಯಮ ವರ್ಗವನ್ನು ಸುಟ್ಟು ಹಾಕುತ್ತಿದೆ, 7.5 ಲಕ್ಷ ಮನೆ ಮಾಲೀಕರು 100 ದಿನಗಳಲ್ಲಿ ಲಕ್ಷ ಲಕ್ಷ ಪಾವತಿಸುವಂತೆ ಒತ್ತಾಯಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಆದ್ರೆ ಇದರ ಬಗ್ಗೆ ಚಿಂತಿಸಬೇಡಿ, ಜೆಡಿಎಸ್ ಪಕ್ಷವು ಪ್ರತಿಯೊಬ್ಬ ಬಿ ಖಾತಾ ಹೊಂದಿರುವವರ ಪರವಾಗಿ ಹೋರಾಡುತ್ತದೆ. ನಾವು ಪ್ರತಿಭಟನೆ ಮೂಲಕ ಮತ್ತು ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತೇವೆ.

ನಿಮ್ಮ ಹಬ್ಬವನ್ನು ಸಂತೋಷದಿಂದ ಆಚರಿಸಿ, ನಾವು ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ. ಈ ಬಗ್ಗೆ ನಾನು ಗುರುವಾರ ಪೂರ್ಣ ವಿವರಗಳೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.


Spread the love

LEAVE A REPLY

Please enter your comment!
Please enter your name here