ರಾಜ್ಯಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ: ಮಧು ಬಂಗಾರಪ್ಪ

0
Spread the love

ಶಿವಮೊಗ್ಗ:  ರಾಜ್ಯದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,  ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದ್ದು,

Advertisement

ಅಕ್ಟೋಬರ್ 23ರಿಂದ ನವೆಂಬರ್ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದೇ ವೇಳೆ ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಅದೇ ರೀತಿ, ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿಗೂ ಸರ್ಕಾರ ಶೀಘ್ರದಲ್ಲೇ ಆದೇಶ ಹೊರಡಿಸಲಿದೆ.

ರಾಜ್ಯದಾದ್ಯಂತ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (KPS) ಪ್ರಾರಂಭಿಸಲು ಯೋಜನೆ ರೂಪಿಸಲಾಗಿದ್ದು, 6ನೇ ತರಗತಿಯಿಂದ ಕನ್ನಡದ ಜೊತೆ ಇಂಗ್ಲಿಷ್ ಕಲಿಕೆಗೂ ಅವಕಾಶ ಇರಲಿದೆ. ಈ ಯೋಜನೆಗೆ ₹3,000 ಕೋಟಿ ರೂ. ಮೀಸಲಿಡಲಾಗಿದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ನವೆಂಬರ್ ಎರಡನೇ ವಾರದಲ್ಲಿ ಮುಖ್ಯಮಂತ್ರಿ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಇದೇ ವೇಳೆ ಎಐ (AI) ಆಧಾರಿತ ಶಿಕ್ಷಣ ವ್ಯವಸ್ಥೆ ರೂಪಿಸಬೇಕೆಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗವಾಗಿ, ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ, ಹಾಗೂ 6ನೇ ತರಗತಿಯಿಂದ ಸ್ಕಿಲ್ ಸ್ಕೂಲ್‌ಗಳ ಪ್ರಾರಂಭ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here