ಬೆಂಗಳೂರು: ತಿಗಣೆ ಔಷಧಿ ವಾಸನೆ ತಾಳಲಾರದೆ ಬಿಟೆಕ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಎಚ್ ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಿರುಪತಿ ಮೂಲದ ಪವನ್ ಮೃತ ದುರ್ಧೈವಿಯಾಗಿದ್ದು, ತಿಗಣೆ ಔಷಧಿ ವಾಸನೆ ತಾಳಲಾರದೆ ಅಸ್ವಸ್ಥಗೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
Advertisement
ಕೂಡಲೇ ಯುವಕನನ್ನು ಖಾಸಗಿ ಆಸ್ಪತ್ರೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವಿದ್ಯಾರ್ಥಿ ಪವನ್ ವಾಸವಾಗಿದ್ದ ಪಿಜಿಯಲ್ಲಿ ತಿಗಣೆ ಔಷಧಿ ಸಿಂಪಡಣೆ ಮಾಡಿದ್ದರು. ಆ ಬಗ್ಗೆ ಮಾಹಿತಿ ಇಲ್ಲದೆ ಕೊಠಡಿಗೆ ತೆರಳಿದ್ದ.
ತಿಗಣೆ ಔಷಧದ ವಿಷಕಾರಿ ವಾಸನೆಯನ್ನು ಉಸಿರಾಡಿದ ಕಾರಣದಿಂದ ಪವನ್ ಅಸ್ವಸ್ಥನಾಗಿ ಕುಸಿದುಬಿದ್ದು, ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಬೆಂಗಳೂರಿನ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕೇಸ್ ದಾಖಲಾಗಿದೆ.