ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರ: ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು..?

0
Spread the love

ಬೆಳಗಾವಿ: ರಾಜ್ಯ ಕಾಂಗ್ರೆಸ್​​ ನಲ್ಲಿ ಮತ್ತೆ ಕುರ್ಚಿ ಕದನ ಎಂಬ ಬೂದಿ ಮುಚ್ಚಿದ ಕೆಂಡ ಪುಟಿದೇಳುತ್ತಿದೆ. ಸೆಪ್ಟೆಂಬರ್ ಮುಗಿದ ಬಳಿಕ ನವೆಂಬರ್ ಕ್ರಾಂತಿಯ ಮಾತುಗಳು ಶುರುವಾಗಿವೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಆಡಿರುವ ಮಾತುಗಳು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿವೆ.

Advertisement

ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೇ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯತಿಂದ್ರ ಅವರು ಅವರ ವೈಯಕ್ತಿಕ ಹೇಳಿಕೆ ನೀಡಿದ್ದಾರೆ. ಅಂತಿಮವಾಗಿ ಯಾರು ನಾಯಕ ಎನ್ನುವುದನ್ನು ಪಕ್ಷದ ಶಾಸಕರು ನಿರ್ಧಾರ ಮಾಡುತ್ತಾರೆ. ಅಹಿಂದ ನಾಯಕತ್ವ ಇಲ್ಲದೇ ಪಕ್ಷ ಸಂಘಟನೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಎಲ್ಲವನ್ನೂ ಕಾಕತಿಯಲ್ಲಿ ನಿಂತು ನಿರ್ಧಾರ ಮಾಡಲು ಸಾಧ್ಯವಿಲ್ಲ. ಡಿಸೆಂಬರ್‌ ಕ್ರಾಂತಿಯ ಬಗ್ಗೆ ನಮಗೆ ಗೊತ್ತೇ ಇಲ್ಲ ಎಂದು ತಿಳಿಸಿದರು. ಸಿದ್ದರಾಮಯ್ಯನವರ ನಂತರ ಪಕ್ಷವನ್ನು ಮುನ್ನಡೆಸುವ ವಿಚಾರಕ್ಕೆ, ಎಲ್ಲವನ್ನೂ ಕಾದು ನೋಡೋಣ ಎಂದು ಜಾರಕಿಹೊಳಿ ಉತ್ತರಿಸಿದರು.


Spread the love

LEAVE A REPLY

Please enter your comment!
Please enter your name here