ಮಂಡ್ಯ: ಮುಂಗಾರು ಮಳೆಯ ಬಳಿಕ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆಯೂ ಚುರುಕಾಗಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಡ್ಯಾಂನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
Advertisement
ಕೆಆರ್‌ಎಸ್ ಡ್ಯಾಂ ಸಂಪೂರ್ಣ ಭರ್ತಿಯಾಗಿರುವ ಕಾರಣ, ಯಾವುದೇ ಕ್ಷಣದಲ್ಲಾದರೂ 40,000 ಕ್ಯೂಸೆಕ್ ನೀರನ್ನು ನದಿಗೆ ಹರಿಸಲು ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮವು ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಿದೆ.
ಪ್ರಸ್ತುತ, ಕೆಆರ್‌ಎಸ್ ಡ್ಯಾಂನ ಒಳಹರಿವಿನ ಪ್ರಮಾಣ 20,797 ಕ್ಯೂಸೆಕ್ ಆಗಿದ್ದು, 25,000 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಡ್ಯಾಂನ ಗರಿಷ್ಠ ಮಟ್ಟ 124.80 ಮೀಟರ್ ಆಗಿದ್ದು, ಗರಿಷ್ಠ ಸಾಮರ್ಥ್ಯ 49.452 ಟಿಎಂಸಿ ನೀರು ಭರ್ತಿಯಾಗಿದೆ.