ನೆಲಮಂಗಲ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಕಾರು ನಡುವೆ ಡಿಕ್ಕಿಯಾಗಿ ಇಬ್ಬರು ಸಾವಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ. ಶಿವಲಿಂಗ ಗೌಡ(60), ಪ್ರಮೀಳಾ (55) ಮೃತ ದುರ್ಧೈವಿಗಳಾಗಿದ್ದು,
ಮೂವರು ಗಂಭೀರ ಗಾಯಗೊಂಡಿದ್ದಾರೆ. ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ ಮಾರುತಿ ಎರ್ಟಿಗಾ ಕಾರು ಬರುತ್ತಿತ್ತು. ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿ ಕುಟುಂಬ ಸದಸ್ಯರು ಬೆಂಗಳೂರಿನ ನಾರಾಯಣ ಆಸ್ಪತ್ರೆಗೆ ಬರುತ್ತಿದ್ದರು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.



