ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ನಿತ್ಯ ವಿಜಯ ಪ್ರತಿಷ್ಠಾನದ ಸಂಸ್ಥಾಪಕ, ಬಿಜೆಪಿಯ ರಾಜ್ಯ ವೈದ್ಯಕೀಯ ಪ್ರಕೋಷ್ಠದ ಸದಸ್ಯರಾದ ಡಾ. ಎಸ್.ವ್ಹಿ. ಶಿವನಗೌಡರ ಅವರ ನೇತೃತ್ವದ ತಂಡವು ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರಲ್ಲಿ ಜಾಗೃತಿ ಮೂಡಿಸುವ ಹಾಗೂ ಮತದಾರರ ಪಟ್ಟಿಗೆ ಹೊಸದಾಗಿ ನೋಂದಣಿ ಮಾಡಿಸುವ ಅಭಿಯಾನವನ್ನು ಗಜೇಂದ್ರಗಡ ತಾಲೂಕಿನಲ್ಲಿ ಕೈಗೊಂಡರು.
Advertisement
ಬಿಜೆಪಿಯ ನಾಯಕ, ಮಾಜಿ ಸಚಿವ ಕಳಕಪ್ಪ ಬಂಡಿ ಅವರನ್ನು ಗಜೇಂದ್ರಗಡದ ಅವರ ನಿವಾಸದಲ್ಲಿ ಭೇಟಿಯಾಗಿ ಚುನಾವಣೆ ಪ್ರಕ್ರಿಯೆ, ಮತದಾರರಲ್ಲಿ ಜಾಗೃತಿ ಹಾಗೂ ಮತದಾರರ ಪಟ್ಟಿಗೆ ಹೊಸದಾಗಿ ನೋಂದಣಿ ಕಾರ್ಯವನ್ನು ಚುರುಕುಗೊಳಿಸುವ ಕುರಿತು ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಕಳಕಪ್ಪ ಬಂಡಿ ಅವರನ್ನು ತಂಡವು ಸನ್ಮಾನಿಸಿ ಗೌರವಿಸಿತು. ಈ ಸಂದರ್ಭದಲ್ಲಿ ತಂಡದ ಸದಸ್ಯರು, ಬಿಜೆಪಿಯ ಕಾರ್ಯಕರ್ತರು ಉಪಸ್ಥಿತರಿದ್ದರು.


